ಸುಳ್ಯ: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಜೂನ್ 21 ಮತ್ತು 22 ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಶ್ರೀನಿವಾಸ ಪೆಜತ್ತಾಯ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹನ್ನೊಂದನೆ ಆವೃತ್ತಿಯ ಉದ್ಯೋಗ ಮೇಳ `ಆಳ್ವಾಸ್ ಪ್ರಗತಿ”ಯನ್ನು ಜೂನ್ 21 ರಂದು ಪೂರ್ವಾಹ್ನ 09.30ಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ಸಚ್ಚಿದಾನಂದ ಉದ್ಘಾಟಿಸಲಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಎಡಪಡಿತ್ತಾಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಉದ್ಯೋಗ ಮೇಳದಲ್ಲಿ ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್‍ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಹಾಸ್ಪಿಟಾಲಿಟಿ, ಶಿಕ್ಷಣ ಮತ್ತು ಎನ್‍ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಆಟ್ರ್ಸ್, ಕಾಮರ್ಸ್ ಹಾಗೂ ಮ್ಯಾನೇಜ್‍ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಮತ್ತು ಇತರ ವಿದ್ಯಾರ್ಹತೆಗಳುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಸುಮಾರು 200ಕ್ಕೂ ಅಧಿಕ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ನೋಂದಾವಣೆ ಪ್ರಕ್ರಿಯೆಯು ಎಲ್ಲಾ ಅಭ್ಯರ್ಥಿಗಳಿಗೆ ಮುಕ್ತವಾಗಿದ್ದು ಜೂನ್ 21 ಹಾಗೂ 22 ಎರಡು ದಿನ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಆನ್‍ಲೈನ್ ನೊಂದಾವಣಿ ಕಡ್ಡಾಯವಾಗಿದ್ದು, ಆ ಮೂಲಕ ಸಂಗ್ರಹವಾದ ಮಾಹಿತಿಯನ್ನು ನೇಮಕಾತಿ ಪ್ರಕ್ರಿಯೆ ಸುಲಲಿತವಾಗಿ ನಡೆಯಲು ಬಳಸಿಕೊಳ್ಳಲಾಗುವುದು. ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 9611686148, 9663190590, 8494934852, 9008907716 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಅವರು ವಿವರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀನಿವಾಸ ಹೊಡೆಯಲ, ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ರೇಷ್ಮಾ ಉದಯ್‍ಕುಮಾರ್ ಉಪಸ್ಥಿತರಿದ್ದರು.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…