ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಸುಳ್ಯ ಹೋಬಳಿಯಲ್ಲಿ ಜೂನ್ 24 ರಿಂದ ಜೂನ್ 26 ರವರೆಗೆ ಹಾಗೂ ಪಂಜ ಹೋಬಳಿಯಲ್ಲಿ ಜೂನ್ 27 ರಿಂದ ಜೂನ್ 29 ರವರೆಗೆ ನಡೆಯಲಿದೆ.
ಸುಳ್ಯ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 24 ರಂದು ಪೂರ್ವಾಹ್ನ 10 ಗಂಟೆಗೆ ಸುಳ್ಯದ ಎಪಿಎಂಸಿ ಪ್ರಾಂಗಣದಲ್ಲಿ ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕ ಎಸ್ ಅಂಗಾರ ಇವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕ ಇವರು ವಹಿಸಲಿದ್ದಾರೆ.
ಪಂಜ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 27 ರಂದು ಪೂರ್ವಾಹ್ನ 10.30 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‍ನಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ ಇವರು ಉದ್ಘಾಟಿಸಲಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರು ಶುಭದಾ ಎಸ್ ವೈ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…