Advertisement
ರಾಜ್ಯ

ಜೂ.28 : ಮನೆಮನೆಗಳಲ್ಲಿ ರಾಮ ಜನ್ಮೋತ್ಸವ

Share

ಬೆಂಗಳೂರು: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾಕಾರಕ್ಕಾಗಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯರು ಆರಂಭಿಸಿರುವ ಧಾರಾ ರಾಮಾಯಣದಲ್ಲಿ ಜೂ. 28ರಂದು ರಾಮಜನನ ಕುರಿತ ಪ್ರವಚನ ನಡೆಯಲಿದ್ದು, ಇದರ ಅಂಗವಾಗಿ ಶ್ರೀಮಠದ ಶಿಷ್ಯ-ಭಕ್ತರ ಮನೆಮನೆಗಳಲ್ಲಿ ಅಂದು ಶ್ರೀರಾಮ ಜನ್ಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

ಶ್ರೀಗಳ ಪ್ರವಚನ ಅಂದು ಶ್ರೀರಾಮನ ಜನ್ಮಘಟ್ಟದ ಬಗ್ಗೆಯೇ ಇದ್ದು, ಇದನ್ನು ಸಂಭ್ರಮಿಸುವ ಸಲುವಾಗಿ ಶ್ರೀರಾಮನ, ಶ್ರೀಗುರುಗಳ, ಶ್ರೀಮಠದ ಶಿಷ್ಯ-ಭಕ್ತ ಅಭಿಮಾನಿಗಳು ಮನೆ ಮನೆಗಳಲ್ಲಿ ಶ್ರೀರಾಮ ಜನ್ಮೋತ್ಸವ ಆಚರಿಸಲಿದ್ದಾರೆ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತು ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಂಜೆ 6.45ರಿಂದ 8 ಗಂಟೆಯ ನಡುವೆ ಪ್ರತಿ ಮನೆಗಳಲ್ಲಿ ರಾಮಜಪ, ಶ್ರೀರಾಮತಾಕರ ಮಂತ್ರ ಪಠಣ, ರಾಮಭಜನೆ, ಪಾನಕ- ಪನಿವಾರ, ಪ್ರಸಾದ ವಿನಿಯೋಗ, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿಶಿಷ್ಟ ಪರಿಕಲ್ಪನೆ ಬಗೆಗಿನ ಪ್ರಸ್ತುತಿ ಪ್ರದರ್ಶನ, ಕಾಣಿಕೆ ಸಮರ್ಪಣೆ ನಡೆಯಲಿದೆ. ಪ್ರತಿ ಮನೆಗಳಿಗೆ ಆಯಾ ಪರಿಸರದ ಸರ್ವ ಸಮಾಜದ ಬಂಧುಗಳನ್ನು ಆಮಂತ್ರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶ್ರೀಮಠದ ಎಲ್ಲ ಶಾಖಾಮಠಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಶ್ರೀರಾಮಜನ್ಮೋತ್ಸವ ಆಚರಿಸಲಾಗುತ್ತದೆ. ಶ್ರೀಗಳ ಪ್ರವಚನ ನಡೆಯುತ್ತಿರುವ ಗಿರಿನಗರ ಶ್ರೀರಾಮಾಶ್ರಮದಲ್ಲಿ ಶ್ರೀರಾಮನಿಗೆ ತೊಟ್ಟಿಲೋತ್ಸವ ಸೇರಿದಂತೆ ವೈವಿಧ್ಯಮಯವಾಗಿ ಶ್ರೀರಾಮ ಜನ್ಮೋತ್ಸವ ಆಚರಿಸಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

1 hour ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

14 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago