ಕುಶಾಲನಗರ: ಸುಳ್ಯದಲ್ಲಿ ಪ್ರಧಾನ ಶಾಖೆಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಶಾಖೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಜೂ.9 ರಂದು ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗೌಡರ ಯುವ ಸೇವಾ ಸಂಘ ಪ್ರವರ್ತಿತ ಸಂಸ್ಥೆಯ 11ನೇ ಶಾಖೆಯು ಕುಶಾಲನಗರ ಬಿ.ಎಂ.ರೋಡ್ ನಲ್ಲಿಯ ಬೈಚನಹಳ್ಳಿ ಆತ್ಮೀಯ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸುವರು. ವೆಂಕಟರಮಣ ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸುವರು. ಗಣಕೀಕರಣವನ್ನು ಮಡಿಕೇರಿ ಶಾಸಕ ಅಪ್ಪಚ್ಚುರಂಜನ್, ಭದ್ರತಾ ಕೊಠಡಿಯನ್ನು ಮಾಜಿ ಸಚಿವ ಬಿ.ಎ.ಜೀವಿಜಯ ಉದ್ಘಾಟಿಸುವರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೇಚಪ್ಪನ ಮೋಹನಕುಮಾರ್, ಪ್ರಥಮ ಪಾಲುಪತ್ರ ವಿತರಣೆಯನ್ನು ಪೊಲೀಸ್ ಉಪ ಅಧೀಕ್ಷಕ ಮುರಳೀಧರ ಪಿ.ಕೆ, ಪ್ರಥಮ ಸಾಲಪತ್ರ ವಿತರಣೆಯನ್ನು ಪಟ್ಟಣ ಪಂಚಾಯತ್ ಸದಸ್ಯೆ ರೇಣುಕಾ ಜಗದೀಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ಲಾಂಟರ್ ದಂಬೆಕೋಡಿ ಲವಕುಮಾರ್, ವಕೀಲರಾದ ತೆಕ್ಕೆಡೆ ನೇಮಿರಾಜ್, ಆತ್ಮೀಯ ಕಾಂಪ್ಲೆಕ್ಸ್ ಮಾಲಕಿ ಡಿ.ಎಚ್.ರುಕ್ಮಿಣಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಪಿ.ಸಿ.ಜಯರಾಮ, ಚಂದ್ರ ಕೋಲ್ಚಾರ್, ಜಾಕೆ ಸದಾನಂದ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ಉಪಸ್ಥಿತರಿದ್ದರು.
–
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…