ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ನಡೆದಿದೆ. ಈ ಸಭೆಯಲ್ಲಿ ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್ ಲೈನ್ ಮೂಲಕ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.
ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…