ಬೆಳ್ಳಾರೆ : ಭಾರತ ಸರಕಾರದ ಯೋಜನಾ ಆಯೋಗದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಾದ ಭಾರತ್ ಸೇವಕ್ ಸಮಾಜದ ವತಿಯಿಂದ ಸುಳ್ಯ ಮತ್ತು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 2019-20ನೇ ಸಾಲಿನ ಒಂದು ವರ್ಷದ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ತರಬೇತಿಗೆ ಸೇರಬಹುದಾಗಿದ್ದು, ತರಬೇತಿ ಪೂರ್ಣಗೊಳಿಸಿದವರಿಗೆ ಭಾರತ್ ಸೇವಕ್ ಸಮಾಜದ ಪ್ರಮಾಣ ಪತ್ರ ನೀಡಲಾಗುತ್ತದೆ. ತರಬೇತಿ ಪಡೆದವರಿಗೆ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಮೊಂಟೆಸ್ಸರಿ ಶಿಕ್ಷಕಿಯರಾಗಿ, ಪಬ್ಲಿಕ್ ಸ್ಕೂಲ್‍ಗಳಲ್ಲಿ ನರ್ಸರಿ/ಮೊಂಟೆಸ್ಸರಿ ಶಿಕ್ಷಕಿಯರುಗಳಾಗಿ, ಅಡಲ್ಟ್ ಎಜ್ಯುಕೇಶನ್ ಸೆಂಟರ್‍ಗಳಲ್ಲಿ ಶಿಕ್ಷಕಿಯರುಗಳಾಗಿ, ಆರ್ಟ್ ಮತ್ತು ಕ್ರಾಫ್ಟ್ ಶಿಕ್ಷಕಿಯರುಗಳಾಗಿ ಸೇವೆ ಸಲ್ಲಿಸಬಹುದು ಅಥವಾ ಸ್ವಂತ ಪ್ಲೇಸ್ಕೂಲ್, ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬಹುದು. ಜ್ಞಾನದೀಪ ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ಈ ತರಬೇತಿಯನ್ನು ನಡೆಸಲಾಗುತ್ತಿದೆ.
ಜೂ.9ರಂದು ಉಚಿತ ಮಾಹಿತಿ ಕಾರ್ಯಾಗಾರ :
2019-20ನೇ ಸಾಲಿನ ದಾಖಲಾತಿಗಾಗಿ ಉಚಿತ ಮಾಹಿತಿ ಕಾರ್ಯಾಗಾರವು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಜೂ.9ರಂದು ಬೆಳಿಗ್ಗೆ 10.00ಗಂಟೆಗೆ ನಡೆಯಲಿದೆ. ಭಾರತ್ ಸೇವಕ್ ಸಮಾಜದ ವತಿಯಿಂದ ನಡೆಸಲ್ಪಡುವ ನರ್ಸರಿ ಶಾಲಾ ಶಿಕ್ಷಕಿಯರ ತರಬೇತಿ ಪ್ರಮಾಣ ಪತ್ರವು ದೇಶ ವಿದೇಶಗಳಲ್ಲಿ ಉದ್ಯೋಗ ಪಡೆಯಲು ಮಾನ್ಯತೆ ಹೊಂದಿದ್ದು, ಜ್ಞಾನದೀಪ ತರಬೇತಿ ಸಂಸ್ಥೆಯಲ್ಲಿ ಈ ತರಬೇತಿಯನ್ನು ಬಿ.ಎಡ್, ಡಿ.ಎಡ್ ಶಿಕ್ಷಣದ ಮಾದರಿಯಲ್ಲಿ ನೀಡಲಾಗುತ್ತಿದೆ. ಪಿಯುಸಿ ಅಥವಾ ಪದವಿ ಮುಗಿಸಿದ ಬಳಿಕ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಉದ್ಯೋಗ ಪಡೆಯಲು ಈ ತರಬೇತಿಯನ್ನು ಪಡೆಯುವುದು ಅವಶ್ಯಕವಾಗಿದ್ದು ತರಬೇತಿ ಪಡೆಯಲಿಚ್ಚಿಸುವವರು ಉಚಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ತರಬೇತಿಯ ಪೂರ್ಣ ವಿವರಗಳನ್ನು ಪಡೆದುಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…