Advertisement
ಸುದ್ದಿಗಳು

ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Share

ಬೆಳ್ಳಾರೆ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇಂಟರ್ಯಾಕ್ಟ್ ದಾರಿದೀಪವಾಗಿದ್ದು, ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗಳನ್ನು ಸೃಷ್ಠಿಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವೇದಿಕೆಯಾಗಿದೆ ಎಂದು ಇಂಟರ್ಯಾಕ್ಟ್ ವಲಯ 15ರ ಝೋನಲ್ ಕೋಆರ್ಡಿನೇಟರ್ ಜಿತೇಂದ್ರ ಎನ್.ಎ ಹೇಳಿದರು.

ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಪ್ರಾಯೋಜಿತ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ಇಂಟರ್ಯಾಕ್ಟ್ ಕ್ಲಬ್‍ನ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದ ಅವರು ರೋಟರಿ ಧ್ಯೇಯಗಳನ್ನು ವಿದ್ಯಾರ್ಥಿಗಳು ಎಳವೆಯಲ್ಲೇ ಅರ್ಥ ಮಾಡಿಕೊಂಡರೆ ಅವರಲ್ಲಿ ನಾಯಕತ್ವದ, ವ್ಯಕ್ತಿತ್ವ ವಿಕಸನದ ಸಂಯಮದಂತಹ ಗುಣಗಳು ಬೆಳೆಯಲು ಸಾಧ್ಯ ಎಂದರು.

ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್‍ನ ನಿರ್ಗಮಿತ ಅಧ್ಯಕ್ಷೆ ಶ್ರೀನಿಧಿ ನೂತನ ಅಧ್ಯಕ್ಷೆ ಯಶ್ಮಿತಾ ಅವರಿಗೆ ಮತ್ತು ನಿರ್ಗಮಿತ ಕಾರ್ಯದರ್ಶಿ ಸಾಯಿಶ್ವೇತ ನೂತನ ಕಾರ್ಯದರ್ಶಿ ಮೇಘಶ್ರೀ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಸದಸ್ಯರಾಗಿ ಸೇರ್ಪಡೆಯಾದ 30 ಮಂದಿ ವಿದ್ಯಾರ್ಥಿಗಳನ್ನು ಪದಗ್ರಹಣ ಅಧಿಕಾರಿ ಹೂ ನೀಡಿ ಸ್ವಾಗತಿಸಿದರು.

ವಿದ್ಯಾಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಹಿತಾಯು ಕ್ಲಿನಿಕ್‍ನ ವೈದ್ಯ ಡಾ.ಯಸ್ ಭಾರದ್ವಾಜ್ ಮಾಹಿತಿ ನೀಡಿದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಬಿ ನರಸಿಂಹ ಜೋಶಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಇಂಟರ್ಯಾಕ್ಟ್ ಚೆಯರ್ಮೆನ್ ಶಶಿಧರ್, ಇಂಟರ್ಯಾಕ್ಟ್ ಶಿಕ್ಷಕ ಸಂಯೋಜಕ ಗಣೇಶ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ಪಿ.ಎಸ್ ಉಪಸ್ಥಿತರಿದ್ದರು.

ಪೂರ್ವಾಧ್ಯಕ್ಷ ಸುಬ್ರಹ್ಮಣ್ಯ ಜೋಶಿ ಪ್ರಸ್ತಾವಿಸಿ ಸ್ವಾಗತಿಸಿದರು. ಮೇಘಶ್ರೀ ವಂದಿಸಿದರು.ವಿದ್ಯಾರ್ಥಿ ಶಿಕ್ಷಕಿ ಆಶಾ ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

13 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

21 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

22 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

22 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago