ಮಂಗಳೂರು : ಸಾರ್ವಜನಿಕರು ತಮಗೆ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫೀವರ್ ಕ್ಲಿನಿಕ್ ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕೋವಿಡ್ ಪರೀಕ್ಷೆಗೊಳಪಡಿಸುವ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೋಗ್ಯ ಸಮಸ್ಯೆಗಳ ಮಾಹಿತಿಯನ್ನು ಅಧಿಕಾರಿಗಳೊಂದಿಗೆ ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ.
ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ನೀಡಲು ಈಗಾಗಲೇ ಆದೇಶಿಸಲಾಗಿದೆ. ಅದರಂತೆ ಎಲ್ಲಾ ಖಾಸಗಿ ವೈದ್ಯಾಧಿಕಾರಿಗಳು ಸಹ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಮಾಹಿತಿಯನ್ನು ನೀಡುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ತಿಳಿಸಲಾಗಿದೆ.
ಈ ರೀತಿ ತ್ವರಿತವಾಗಿ ಮಾಹಿತಿಯನ್ನು ನೀಡುವುದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆತು ಗುಣಪಡಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…