ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ಜ.19 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ಸಂಜೆ ನಾಲ್ಕಕ್ಕೆ ನಡೆಯುವ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸುವರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಗುತ್ತಿಗಾರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ ಪ್ರಸಾದ್ ಎಂ.ಆರ್ ಭಾಗವಹಿಸಲಿದ್ದಾರೆ.
ಉದ್ಘಾಟನೆಯ ಬಳಿಕ ಸಂಜೆ 5.30 ರಿಂದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಹಾಡುಗಾರಿಕೆ ನಡೆಯಲಿದೆ. ವಯಲಿನ್‍ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್‍ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಲಿದ್ದಾರೆ ಎಂದು ರಂಜನಿ ಸಂಗೀತ ಸಭಾದ ನಿರ್ದೇಶಕ ಸತ್ಯನಾರಾಯಣ ಹೊನ್ನಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…