ಪುತ್ತೂರು: ನೆಹರು ನಗರದ ವಿವೇಕಾನಂದ ಕಾಲೇಜಿನಲ್ಲಿ ಜ. 20 ಮತ್ತು 21 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ. ಮಂಗಳೂರು ವಲಯದ ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕು ಮತ್ತು ಕೊಡಗು ಜಿಲ್ಲೆಯಿಂದ ಸುಮಾರು 47 ಕಾಲೇಜುಗಳು ಭಾಗವಹಿಸುತ್ತಿವೆ. ಪ್ರಥಮ ಬಾರಿಗೆ ಮ್ಯಾಟ್ ಅಂಗಳದ ಕಬಡ್ಡಿ ಪಂದ್ಯಾಟ ನಡೆಯುತ್ತಿದ್ದು, ವಿವೇಕಾನಂದ ಕಾಲೇಜು 40 ವರ್ಷಗಳ ಬಳಿಕ ಈ ಪಂದ್ಯಾಟದ ಆತಿಥ್ಯವನ್ನು ವಹಿಸಿದೆ.
ಜ.20 ರಂದು ಬೆಳಗ್ಗೆ 9.45ಕ್ಕೆ ಉದ್ಘಾಟನ ಕಾರ್ಯಕ್ರಮ ನಡೆಯಲಿದ್ದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ವಿಜಯ ಬ್ಯಾಂಕ್‍ನ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ನಿರ್ದೇಶಕ ಗುಣಪಾಲ ಜೈನ್, ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ., ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್., ಆಡಳಿತ ಮಂಡಳಿಯ ಸದಸ್ಯರಾದ ರಮಾನಾಥ ಶೆಣೈ, ಕೃಷ್ಣ ನಾಯ್ಕ್ ಎ., ಉಷಾ ನಾಯಕ್ ಅಭ್ಯಾಗತರಾಗಿ ಉಪಸ್ಥಿತರಿರಲಿದ್ದಾರೆ.
ಜ.21 ರಂದು ಸಂಜೆ 3ಕ್ಕೆ ಸಮಾರೋಪ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಆರೋಗ್ಯ ವಿಭಾಗ, ರಾಷ್ಟ್ರೀಯ ಕಬಡ್ಡಿ ಆಟಗಾರ, ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ರವಿ ಸುವರ್ಣ, ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದ ದೈಹಿಕ ಶಿಕ್ಷಣ ನಿರ್ದೇಶಕ, ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಕಾಶ್ ಮಾಣಿ, ಭದ್ರಾವತಿಯ ಕ್ಯಾಂಪ್ಕೊ ಮ್ಯಾನೇಜರ್ ಹಾಗೂ ರಾಷ್ಟ್ರೀಯ ಕಬಡ್ಡಿ ಆಟಗಾರ ಬಿಪಿನ್ ಕುಮಾರ್ ಶೆಟ್ಟಿ ಮಾಣಿ ಹಾಗೂ ಬೆಂಗಳೂರಿನ ಆಡಿ ಕಂಪೆನಿಯ ಹೆಚ್.ಆರ್. ಮ್ಯಾನೇಜರ್, ರಾಷ್ಟ್ರೀಯ ಕಬಡ್ಡಿ ಆಟಗಾರ ವಿಕಾಸ್ ಮಾಣಿ ಆಗಮಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಆಡಳಿತ ಮಂಡಳಿಯ ಕೋಶಾಧಿಕಾರಿ ಜನಾರ್ದನ ಭಟ್ ಎಸ್., ಸದಸ್ಯರಾದ ಎಂ. ಅನಂತಕೃಷ್ಣ ನಾಯಕ್, ಶೋಭಾ ಕೊಳತ್ತಾಯ ಎನ್., ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಐಕ್ಯುಎಸಿ ಘಟಕದ ಸಂಯೋಜಕ ಡಾ. ಶ್ರೀಧರ ಎಚ್.ಜಿ. ಮತ್ತಿತರರು ಉಪಸ್ಥಿತರಿರಲಿದ್ದಾರೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…