ಸುಳ್ಯ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನ ಚಿತ್ರಗಳ ಪ್ರದರ್ಶನ ‘ಚಲನಚಿತ್ರೋತ್ಸವ’ ಕಾರ್ಯಕ್ರಮ ಜ.4 ರಂದು ಮುಕ್ಕೂರು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿದೆ.
ಚಲನಚಿತ್ರೋತ್ಸವದಲ್ಲಿ ಪಿ.ಶೇಷಾದ್ರಿ ನಿರ್ದೇಶನದ ಬೆಟ್ಟದ ಜೀವ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಸರಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರ ಪ್ರದರ್ಶನಗೊಳ್ಳಲಿದೆ.
ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಧಿಕಾರಿ ಎಸ್.ಪಿ.ಮಹಾದೇವ ಭಾಗವಹಿಸಲಿದ್ದಾರೆ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ, ನೇಸರ ಯುವಕ ಮಂಡಲ ಗೌರವ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಪದ್ಮಾವತಿ ದೇವಿಮೂಲೆ, ಪ್ರಭಾರ ಮುಖ್ಯಗುರು ವಸಂತಿ ಭಾಗವಹಿಸಲಿದ್ದಾರೆ.
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…