ಪುತ್ತೂರು: ನವಚೇತನ ಸ್ನೇಹಸಂಗಮ ಹಾಗೂ ಜೇಸೀಐ ಪುತ್ತೂರು ಇದರ ಆಶ್ರಯದಲ್ಲಿ ಜ.4 ಹಾಗೂ 5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾವಯವ ಹಬ್ಬ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾವಯವ ಹಬ್ಬದಲ್ಲಿ ಸಿರಿಧಾನ್ಯ, ದಿನಸಿ ಹಾಗೂ ತರಕಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು ವಿಷಮುಕ್ತ ಅನ್ನದ ಬಟ್ಟಲು ಈ ಹಬ್ಬದ ಧ್ಯೇಯವಾಗಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರಿಂದ ನೇರವಾಗಿ ಗ್ರಾಹಕರಿಗೆ ಈ ಹಬ್ಬದ ಮೂಲಕ ತಲಪಿಸುವ ಮೂಲಕ ಸಾವಯವ ಜಾಗೃತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ.ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳು, ಸಾವಯವ ಕೃಷಿ ಮಾತುಕತೆ ನಡೆಯಲಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…