ಸುಳ್ಯ: ಟಿಪ್ಪು ಜಯಂತಿಯನ್ನು ರದ್ದು ಮಾಡಿದ ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರದ ನಿರ್ಣಯ ಅತ್ಯಂತ ಸ್ವಾಗತಾರ್ಹವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ಹೇಳಿದ್ದಾರೆ.
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾವು ಕೇವಲ ಮುಸ್ಲಿಂರನ್ನು ಒಲೈಕೆ ಮಾಡುವ ಉದ್ದೇಶದಿಂದ ಕನ್ನಡ ವಿರೋಧಿ, ಅತ್ಯಂತ ಕ್ರೂರಿ, ಸಾವಿರಾರು ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡಿದ, ಲಕ್ಷಾಂತರ ಹಿಂದೂಗಳ ಹತ್ಯೆ ಮಾಡಿದ ಟಿಪ್ಪು ಜಯಂತಿಯನ್ನು ಸರಕಾರದ ಸ್ಥರದಲ್ಲಿ ಆಚರಣೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿತ್ತು. ಇಂದು ಈ ನಿರ್ಣಯವನ್ನು ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರವು ಟಿಪ್ಪು ಜಯಂತಿ ಆಚರಣೆಯನ್ನು ರದ್ಧು ಮಾಡಿದೆ. ಇದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ. ಹಿಂದೂ ಜನಜಾಗೃತಿ ಸಮಿತಿಯು ಟಿಪ್ಪು ಜಯಂತಿ ಆಚರಣೆಯ ವಿರುದ್ಧ ರಾಜ್ಯವ್ಯಾಪಿ ಆಂದೋಲನವನ್ನು ಇತರ ಹಿಂದೂ ಸಂಘಟನೆಗಳ ಜೊತೆಗೆ ಸೇರಿ ಮಾಡಿತ್ತು. ಭಾಜಪ ಸರಕಾರ ಟಿಪ್ಪು ಜಯಂತಿಯ ರದ್ದು ನಿರ್ಣಯವನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement