ಟಿಪ್ಪು ವಿವಾದವನ್ನು ಜೀವಂತವಾಗಿಡಲು ಹುನ್ನಾರ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪ

November 2, 2019
9:17 AM

ಮಡಿಕೇರಿ : ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರದಿಂದ ತೃಪ್ತರಾಗದ ಬಿಜೆಪಿ ಮಂದಿ ಟಿಪ್ಪು ವಿವಾದವನ್ನು ಜೀವಂತವಾಗಿಡಬೇಕೆನ್ನುವ ಉದ್ದೇಶದಿಂದ ಪಠ್ಯ ಪುಸ್ತಕದಲ್ಲಿನ ಟಿಪ್ಪು ಅಧ್ಯಾಯದ ವಿಚಾರವನ್ನು ಕೆದಕಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಆರೋಪಿಸಿದೆ.

Advertisement
Advertisement
Advertisement

ಪತ್ರಿಕಾ ಹೇಳಿಕೆ ನೀಡಿರುವ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎ.ಕೆ.ಹ್ಯಾರಿಸ್, ಪಠ್ಯ ಕ್ರಮದಿಂದ ಟಿಪ್ಪು ಅಧ್ಯಾಯವನ್ನು ಕೈ ಬಿಡುವ ನಿರ್ಧಾರ ಖಂಡನೀಯವೆಂದು ತಿಳಿಸಿದ್ದಾರೆ. ನಿತ್ಯ ಭಾವನಾತ್ಮಕ ವಿಚಾರಗಳಲ್ಲೇ ವಿವಾದಗಳನ್ನು ಸೃಷ್ಟಿಸುವ ಬಿಜೆಪಿ ಸೌಹಾರ್ದ ವಾತಾವರಣಕ್ಕೆ ಹುಳಿ ಹಿಂಡುವ ಕಾರ್ಯ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಟಿಪ್ಪು ಜಯಂತಿ ಆಚರಣೆಯ ವಿವಾದದಿಂದ ಸಾವು, ನೋವುಗಳು ಸಂಭವಿಸಿ ಅಶಾಂತಿಯ ವಾತಾವರಣ ಮೂಡಿ ಸಾಮರಸ್ಯಕ್ಕೆ ದಕ್ಕೆಯಾಗಿತ್ತು. ರಾಜಕೀಯ ಲಾಭಕ್ಕಾಗಿ ಈ ವಿವಾದವನ್ನು ಸೃಷ್ಟಿಸಿದ ಬಿಜೆಪಿ ತಾನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಯಂತಿಯನ್ನು ರದ್ದುಗೊಳಿಸಿತು. ಸರ್ಕಾರದ ನಿರ್ಧಾರಕ್ಕೆ ದೊಡ್ಡ ಮಟ್ಟದ ಪ್ರತಿರೋಧ ವ್ಯಕ್ತವಾಗದ ಕಾರಣ ಇದೀಗ ಟಿಪ್ಪು ಪಾಠದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ವಿವಾದವನ್ನು ಜೀವಂತವಾಗಿಡಲು ಹವಣಿಸಲಾಗುತ್ತಿದೆ. ಭಾವನೆಗಳ ಜೊತೆ ಚೆಲ್ಲಾಟವಾಡುವ ಬಿಜೆಪಿ ಅಜೆಂಡಾದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗುತ್ತಿದೆ ಎಂದು ಹ್ಯಾರಿಸ್ ಆರೋಪಿಸಿದ್ದಾರೆ.

Advertisement

ಡಿಸೆಂಬರ್ ತಿಂಗಳಿನಲ್ಲಿ ಉಪ ಚುನಾವಣೆ ನಡೆಯಲಿದ್ದು, ಸೋಲಿನ ಭೀತಿಯಲ್ಲಿರುವ ಬಿಜೆಪಿ ಮಂದಿ ಟಿಪ್ಪು ಪಠ್ಯದ ಅಸ್ತ್ರವನ್ನು ಬಳಸಿಕೊಳ್ಳುವ ಮೂಲಕ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಒಂದು ವೇಳೆ ಮಧ್ಯಂತರ ಚುನಾವಣೆ ಎದುರಾದರೂ ಈ ರೀತಿಯ ವಿವಾದಗಳು ಲಾಭ ತಂದುಕೊಡಲಿದೆ ಎನ್ನುವ ಭ್ರಮೆಯಲ್ಲಿ ಬಿಜೆಪಿ ಇದೆ ಎಂದು ಅವರು ಟೀಕಿಸಿದ್ದಾರೆ.ಕಳೆದ ಮೂರು ತಿಂಗಳಿನಿಂದ ರಾಜ್ಯ ವ್ಯಾಪಿ ನಿರಂತರ ಮಳೆಯಾಗಿ ಕಷ್ಟ, ನಷ್ಟಗಳು ಸಂಭವಿಸಿದೆ. ಕೊಡಗು ಜಿಲ್ಲೆ ಸೇರಿದಂತೆ ವಿವಿಧೆಡೆ ಸಾವಿರಾರು ಮಂದಿ ನಿರಾಶ್ರಿತರಾಗಿ ಸಂಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಮಳೆಹಾನಿ ಸಂತ್ರಸ್ತರ ನೋವಿಗೆ ಸ್ಪಂದಿಸುವ ಕಾಳಜಿ ತೋರದ ಸರ್ಕಾರ ಟಿಪ್ಪು ಪಾಠ ತೆಗೆಯುವ ಕುರಿತು ತಲೆಕೆಡಿಸಿಕೊಂಡಿರುವುದನ್ನು ಗಮನಿಸಿದರೆ ಜನರ ಹಿತ ಕಾಯುವುದಕ್ಕಿಂತ ಇವರಿಗೆ ರಾಜಕೀಯ ಲಾಭ ಮಾಡಿಕೊಳ್ಳುವುದೇ ಹೆಚ್ಚಾಗಿದೆ ಎನ್ನುವ ಸಂಶಯ ಮೂಡುತ್ತಿದೆ ಎಂದು ಹ್ಯಾರಿಸ್ ಆರೋಪಿಸಿದ್ದಾರೆ.

ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಬ್ದಾರಿ ಪ್ರತಿಯೊಂದು ಸರ್ಕಾರದ ಮೇಲಿದೆ. ಟಿಪ್ಪು ಸುಲ್ತಾನ್ ಒಬ್ಬ ವೀರ ಸ್ವಾತಂತ್ರ್ಯ ಹೋರಾಟಗಾರನಾಗಿದ್ದು, ಇತಿಹಾಸದಲ್ಲಿ ದಾಖಲಾಗಿರುವ ಅಂಶಗಳನ್ನು ಅಧ್ಯಯನ ಮಾಡುವ ದೊಡ್ಡ ಮನಸ್ಸನ್ನು ಬಿಜೆಪಿ ಮಂದಿ ಮಾಡಲಿ ಎಂದು ಒತ್ತಾಯಿಸಿದ್ದಾರೆ. ಬಿಜೆಪಿ ಇದೇ ರೀತಿ ವಿವಾದಗಳನ್ನು ಸೃಷ್ಟಿಸುತ್ತಾ ರಾಜಕೀಯ ಲಾಭಕ್ಕಾಗಿ ಹವಣಿಸುತ್ತಿದ್ದರೆ ಅಭಿವೃದ್ಧಿ ವಂಚಿತ ಜನ ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಸಮಾಜ ನಿರ್ಮಿಸುವುದರಲ್ಲಿ ಸಂಶಯವಿಲ್ಲವೆಂದು ಭವಿಷ್ಯ ನುಡಿದಿರುವ ಹ್ಯಾರಿಸ್, ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕದಿಂದ ಟಿಪ್ಪು ಇತಿಹಾಸವನ್ನು ಕೈಬಿಡಬಾರದೆಂದು ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚುನಾವಣೆ ಎಂಬುದು ಯುದ್ಧವಲ್ಲ | ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ | ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ |
March 26, 2024
11:06 AM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಕೇಂದ್ರದಿಂದ ಸಿಗದ ಬರ ಪರಿಹಾರ | ಬರ ಪರಿಹಾರಕ್ಕಾಗಿ ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ಸಿದ್ದರಾಮಯ್ಯ ಸರ್ಕಾರ | ಸರ್ಕಾರದ ನಡೆಯ ವಿರುದ್ಧ ಬಿಜೆಪಿ ಗರಂ |
March 23, 2024
11:55 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |
March 23, 2024
11:10 PM
by: The Rural Mirror ಸುದ್ದಿಜಾಲ
ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!
March 22, 2024
11:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror