Advertisement
ಸುದ್ದಿಗಳು

ಟಿ-20: ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಸರಣಿ ಗೆಲುವು

Share

ಮುಂಬೈ:ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ 67 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿಗೆ 241 ಗುರಿ ಪಡೆದಿದ್ದ ವೆಸ್ಟ್‌ ಇಂಡೀಸ್‌ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಈ ಮೂಲಕ ಭಾರತ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿತು.

ವಿಂಡೀಸ್ ಪರ ಹೆಟ್ಮಿರ್ 5 ಭರ್ಜರಿ ಸಿಕ್ಸರ್ ಸಿಡಿಸಿ 41 ರನ್ ಹಾಗೂ ಕೀರೊನ್ ಪೊಲಾರ್ಡ್ 5 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಮೂಲಕ 68 ರನ್ ಗಳಿಸಿದರು. ಭಾರತ ಪರ ಮುಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್ ಹಾಗೂ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವಿಂಡೀಸ್ ಗೆ ಕಠಿಣ ಸವಾಲು ವಿಧಿಸಿತ್ತು. 20 ಓವರ್ ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿ ವಿಂಡೀಸ್ ಗೆ 241 ರನ್ ಗಳ ಗುರಿ ನೀಡಿತ್ತು. ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ ಹಾಗೂ ಕೆ.ಎಲ್‌ ರಾಹುಲ್‌ ಮೊದಲ ವಿಕೆಟ್‌ಗೆ 135 ರನ್‌ ಗಳಿಸಿದರು. ರೋಹಿತ್‌ ಶರ್ಮಾ 71 ರನ್ ಗಳಿಸಿ ಔಟಾದರು. ಬಳಿಕ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ರಿಷಭ್‌ ಪಂತ್‌ ಖಾತೆ ತೆರೆಯದೆ ನಿರ್ಗಮಿಸಿದರು. ನಂತರ ವಿರಾಟ್‌ ಕೊಹ್ಲಿ ಕೇವಲ 29 ಎಸೆತಗಳಲ್ಲಿ ಏಳು ಸಿಕ್ಸರ್‌ ಹಾಗೂ 4 ಬೌಂಡರಿ ಮೂಲಕ 70 ರನ್‌ ಗಳಿಸಿದರು. ಕನ್ನಡಿಗ ರಾಹುಲ್‌ 56 ಎಸೆತಗಳಲ್ಲಿ 91 ರನ್‌ ಗಳಿಸಿ ಔಟಾದರು.

ವೆಸ್ಟ್‌ ಇಂಡೀಸ್‌ ಪರ ಶೇಲ್ಡನ್‌ ಕಾಟ್ರೆಲ್‌ 40ಕ್ಕೆ 1, ಕೆಸ್ರಿಕ್ ವಿಲಿಯಮ್ಸ್ 37ಕ್ಕೆ 1, ಕೀರನ್ ಪೊಲಾರ್ಡ್ 33ಕ್ಕೆ 1 ವಿಕೆಟ್‌ ಪಡೆದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

11 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

17 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

21 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago