ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್ನ್ನು 497 ರನ್ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.
ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.
ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…