ಸುಳ್ಯ: ಬೆಂಗಳೂರಿನಲ್ಲಿ ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್ ಹಾಗೂ ಕೃಷಿಕ ಸಾಹಿತ್ಯಪರಿಷತ್ತು ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಹಾಗೂ ‘ಕೆಂಪೇಗೌಡರ ಯಲಹಂಕ ಸಂಸ್ಥಾನದ ಇತಿಹಾಸ ಮತ್ತು ಐತಿಹ್ಯದ ಬಗ್ಗೆ ವಿಚಾರ ಸಂಕಿರಣ’ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿರುವುದು ವಿವಾದ ಹಾಗೂ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಟ್ವಿಟ್ಟರ್ ಮೂಲಕ ಡಿ.ವಿ.ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
ಡಿ.ವಿ.ಸದಾನಂದ ಗೌಡ ಅವರು ಕಾರ್ಯಕ್ರಮ ಉದ್ಘಾಟಿಸಿ, ನನ್ನ ಹೆಸರಿನೊಂದಿಗೆ ಗೌಡ ಎಂಬುದನ್ನು ಸೇರಿಸಿಕೊಂಡಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ, ಈಗ ಕೇಂದ್ರ ಸಚಿವನಾಗಿದ್ದೇನೆ. ಅದನ್ನು ಹೇಳಲು ನನಗೆ ಹಿಂಜರಿಕೆ, ನಾಚಿಕೆ ಇಲ್ಲ ಎಂದು ಹೇಳಿದ್ದರು. ಇದು ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು. ಹಿಂದು ಸಮಾಜ ಎನ್ನುತ್ತಾ ಜಾತಿಯನ್ನು ಏಕೆ ತರುತ್ತೀರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಪರ ಸಂಘಟನೆಗಳು ಚರ್ಚೆ ಮಾಡಿದ್ದವು. ಟ್ವಿಟ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೂ ಪ್ರಶ್ನೆ ಮಾಡಿದ್ದವು.
ಇದೀಗ ಸದಾನಂದ ಗೌಡ ಅವರು ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದು,
“ನನ್ನ ಬಿಜೆಪಿ ಪಕ್ಷ , ನನ್ನ ಹೆತ್ತ ತಾಯಿ ಸಮಾನ. ಕುಗ್ರಾಮ ಮಂಡೆಕೋಲಿನಿಂದ ಬಂದ ಈ ಹುಡುಗನಿಗೆ ಪಕ್ಷ ಎಲ್ಲವನ್ನು ಕೊಟ್ಟಿದೆ. ನನ್ನ ಪಕ್ಷ ಒಕ್ಕಲಿಗ ಸಮಾಜಕ್ಕೆ ಉತ್ತಮ ಸ್ಥಾನಮಾನ ಪ್ರಾತಿನಿಧಿತ್ವವನ್ನು ನನ್ನ ಮೂಲಕ ಕೊಟ್ಟಿದೆ ಅನ್ನುವ ಮಾತನ್ನು ನಾನು ಹೆಮ್ಮೆಯಿಂದ ಕೇಳಿಕೊಂಡದ್ದನ್ನು ಬೇರೆ ರೀತಿ ಅರ್ಥೈಸಲಾಗಿದೆ. ನಾನಿಂದು ನಿರಂತರ ಚುನಾವಣೆಗಳನ್ನು ಗೆಲ್ಲಲು ಜಾತ್ಯತೀತವಾಗಿ.ಪಕ್ಷಾತೀತವಾಗಿ ನನ್ನನ್ನು ಜನರು ಆಯ್ಕೆ ಮಾಡಲು ನನ್ನ ಪಕ್ಷ ಮತ್ತು ಮೋದಿಯವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು. ಗೌರವಿಸುವುದು ಮೋದಿಯವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ” ಎಂದು ಟ್ವೀಟ್ ಮಾಡಿದ್ದಾರೆ.
Advertisement
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…