ಸುಳ್ಯ: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ, ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆವರು ರಚಿಸಿದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಕೃತಿ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು.
ಬಿಳಿಮಲೆ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಬಿ.ಎ.ವಿವೇಕ ರೈ ಪುಸ್ತಕ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಟಿ.ಜಿ.ಮುಡೂರು ಅಧ್ಯಕ್ಷತೆ ವಹಿಸಿದ್ದರು.ಪ್ರೊ. ಕೆ.ಚಿನ್ನಪ್ಪ ಗೌಡ, ಜಾಕೆ ಮಾಧವ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರೊ. ಪದ್ಮನಾಭ ಗೌಡ ಬಿಳಿಮಲೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಷಾ ಕಟ್ಟೆಮನೆ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ದೆಹಲಿ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ನಾನಾ ಕಡೆಗಳಿಂದ ಸಾಹಿತ್ಯ ಮತ್ತು ಸಾಂಸ್ಜೃತಿಕ ಕ್ಷೇತ್ರದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಪ್ರಮುಖರು ಭಾಗವಹಿಸಿದ್ದರು. ಬಳಿಕ ತಾಳಮದ್ದಳೆ, ತಾಳ ಮದ್ದಳೆ ಕುರಿತು ಸಂವಾದ ನಡೆಯಿತು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel