ಸುಳ್ಯ: ಹಿರಿಯ ಸಾಹಿತಿ, ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಬಿ.ಪ್ರಭಾಕರ ಶಿಶಿಲರ ಆತ್ಮಕಥನ ‘ಬೊಗಸೆ ತುಂಬಾ ಕನಸು‘ ಪುಸ್ತಕ ಬಿಡುಗಡೆಗೊಂಡಿತು.
ಮೈಸೂರು ರಾಜ್ ಪ್ರಕಟಿಸಿರುವ ಕೃತಿಯನ್ನು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಬಿಡುಗಡೆ ಮಾಡಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮುಖ್ಯ ಅತಿಥಿಯಾಗಿದ್ದರು. ದೆಹಲಿ ಜವಾಹರಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಬಿ.ಪುರುಷೋತ್ತಮ ಬಿಳಿಮಲೆ ಪ್ರಧಾನ ಭಾಷಣ ಮಾಡಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ. ಅತಿಥಿಗಳಾಗಿದ್ದರು.
ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಮಾರ್ಗದರ್ಶಕಿ ಪ್ರೊ.ರತ್ನಾವತಿ ಕೇರ್ಪಳ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಪೂವಪ್ಪ ಕಣಿಯೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಕಾಲೇಜಿನ ವಿದ್ಯಾರ್ಥಿ ನಾಯಕ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.
ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯ ಮತ್ತು ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.