ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ ನಡೆಯಲಿದೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು. ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸುವುದಾಗಿ ಅವರು ಹೇಳಿದರು.
ಡಿಕೆಶಿ ಬಂಧನ ರಾಜಕೀಯ ಷಡ್ಯಂತ್ರದ ಭಾಗವಾಗಿ ನಡೆದಿದೆ. ಸಮುದಾಯದ ನಾಯಕರಿಗೆ ಸಂಕಷ್ಟ ಬಂದಾಗ ಸಮುದಾಯ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ದಿನೇಶ್ ಮಡ್ತಿಲ ಉಪಸ್ಥಿತರಿದ್ದರು.
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…