ಸುಳ್ಯ: ವಿಧಾನಸಭಾ ಕ್ಷೇತ್ರದ ಮೂರು ಮಂದಿ ಸಂಸದರಾಗಿರುವ ಹೆಮ್ಮೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವೂ ಇದೀಗ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಲಿದು ಬಂದಿದೆ.
ನಿರೀಕ್ಷೆಯಂತೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಡಿ.ವಿ.ಸದಾನಂದ ಗೌಡರ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರದವರು ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಅಲಂಕರಿಸುತ್ತಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದಾರೆ. ಸಂಸದರಾಗಿ ಕಾರ್ಯನಿರ್ವಹಿಸುವ ಜೊತೆ ಜೊತೆಗೆ ಕೇರಳ ಬಿಜೆಪಿಯ ಸಹಪ್ರಬಾರಿಯಾಗಿ ಪಕ್ಷ ಸಂಘಟನೆಯಲ್ಲಿಯೂ ಸಕ್ರೀಯರಾಗಿದ್ದಾರೆ. ಇದೀಗ ರಾಜ್ಯಾಧ್ಯಕ್ಷರಾಗುವ ಮೂಲಕ ಮಹತ್ತರ ಹುದ್ದೆಯನ್ನು ಅಲಂಕರಿಸಲಿದ್ದಾರೆ.
ಸುಳ್ಯ ವಿಧಾನಸಭಾ ಮೂಲದವರಾದ ನಳಿನ್ ಕುಮಾರ್ ಕಟೀಲ್, ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸಂಸದರಾಗಿದ್ದಾರೆ. ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ಸದಾನಂದ ಗೌಡರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಎರಡನೇ ಅವಧಿಗೆ ಕೇಂದ್ರ ಸಚಿವರಾಗಿದ್ದಾರೆ. ಇದೀಗ ಸದಾನಂದ ಗೌಡರ ಬಳಿಕ ನಳಿನ್ ಮೂಲಕ ಜಿಲ್ಲೆಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದು ಬಂದಿದೆ. ಇದು ಜಿಲ್ಲೆಯ ಬಿಜೆಪಿಗೆ ಇನ್ನಷ್ಟು ಹುರುಪು ತುಂಬಲಿದೆ ಎಂದು ವಿಶ್ಲೇಷಿಸಲಾಗುತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ, ಆರು ಬಾರಿ ಶಾಸಕರಾದ ಅಂಗಾರರಿಗೆ ಮಂತ್ರಿ ಗಿರಿ ನೀಡಿಲ್ಲ ಎಂಬ ಅಸಮಾಧಾನ ಹೊಗೆಯಾಡುತ್ತಿರುವುದರ ಮಧ್ಯೆ ಹೈಕಮಾಂಡ್ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷತೆಯ ಪಟ್ಟ ನೀಡಿದೆ ಎಂಬುದು ವಿಶೇಷ.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…