ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಪ್ರತಿನಿಧಿಗಳಿಂದ ಅಡ್ಡಮತದಾನ ನಡೆದರೂ ಯಾವುದೇ ಕ್ರಮ ಆಗದಿರುವ ಬಗ್ಗೆ ಸುಳ್ಯದ ಬಿಜೆಪಿಯಲ್ಲಿ ಈಗ ಚರ್ಚೆ ಹೆಚ್ಚಾಗಿದೆ. ಇದೀಗ ಬಿಜೆಪಿಯು ಅಡ್ಡಮತದಾನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹೇಗೆ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಪ್ರಮುಖರ ಹಾಗೂ ಸಂಘಪರಿವಾರದ ಪ್ರಮುಖರ ಸಭೆ ನಡೆದಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಹಾಗೂ ಸಂಘಪರಿವಾರದ ಭದ್ರಕೋಟೆಯಾದ ಸುಳ್ಯದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಸಹಕಾರಭಾರತಿ ಬಹುಮತ ಇದ್ದರೂ ಸೋಲು ಕಂಡಿದೆ.
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಯಾಗಿ ವೆಂಕಟ್ ದಂಬೆಕೋಡಿ ಹಾಗೂ ಸೌಹಾರ್ದ ಸಹಕಾರಿ ಅಭ್ಯರ್ಥಿಯಾಗಿ ಕೆ ಎಸ್ ದೇವರಾಜ್ ಸ್ಫರ್ಧೆ ಮಾಡಿದ್ದರು. ಸುಳ್ಯ ಕ್ಷೇತ್ರದಲ್ಲಿ ಸಹಕಾರ ಭಾರತಿ ಮೇಲುಗೈ ಹೊಂದಿತ್ತು. ಸಹಜವಾಗಿಯೇ ಸಹಕಾರ ಭಾರತಿ ಗೆಲ್ಲುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ 7 ಮಂದಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಸದಸ್ಯರು ಅಡ್ಡಮತದಾನ ಮಾಡಿದ ಪರಿಣಾಮವಾಗಿ ಕೆ ಎಸ್ ದೇವರಾಜ್ ಅವರು ವೆಂಕಟ್ ದಂಬೆಕೋಡಿ ವಿರುದ್ಧ ಗೆಲುವು ಸಾಧಿಸಿದ್ದರು.
ಈ ಅಡ್ಡಮತದಾನದ ಬಗ್ಗೆ ಬಿಜೆಪಿ ಕಾರ್ಯಕರ್ತರೊಳಗೆ ವ್ಯಾಪಕ ಚರ್ಚೆ ಹಾಗೂ ಟೀಕೆ ವ್ಯಕ್ತವಾಗಿತ್ತು. ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮವಾಗಬೇಕು ಎಂಬ ಒತ್ತಾಯ ಅಂದೇ ಕೇಳಿಬಂದಿತ್ತು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಬಿಜೆಪಿ ಹಾಗೂ ಸಹಕಾರ ಭಾರತಿ ಮೌನವಾಗಿತ್ತು. ಪುತ್ತೂರು ಹಾಗೂ ಬಂಟ್ವಾಳದಲ್ಲಿ ಅಡ್ಡಮತದಾನ ಮಾಡಿದವರ ಬಗ್ಗೆ ಸ್ಪಷ್ಠ ಮಾಹಿತಿ ಇದ್ದ ಕಾರಣ ಸಹಕಾರ ಭಾರತಿಯಿಂದ ಅವರನ್ನು ಉಚ್ಛಾಟನೆ ಮಾಡಲಾಗಿತ್ತು. ಸುಳ್ಯದಲ್ಲಿ ಚುನಾವಣೆಯ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದರು.
ಇದೀಗ ಚುನಾವಣೆಯ ಬಳಿಕ ಮತ್ತೆ ಚರ್ಚೆ ಆರಂಭವಾದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಸಂಘಪರಿವಾರದ ಪ್ರಮುಖರು ಸಭೆ ನಡೆಸಿದ್ದು , ಅಡ್ಡಮತದಾನ ಮಾಡಿದವರು ಪಕ್ಷದ ಹಿರಿಯ ಬಳಿ ಒಪ್ಪಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಯಾರೊಬ್ಬರೂ ಒಪ್ಪಿಕೊಂಡಿಲ್ಲ.
ಹೀಗಾಗಿ ಮತದಾನ ಮಾಡಿದ ಎಲ್ಲರೂ ಪಕ್ಷದ ಹಾಗೂ ಸಹಕಾರ ಭಾರತಿಯ ಎಲ್ಲಾ ಹುದ್ದೆಗಳಿಗೆ ರಾಜಿನಾಮೆ ನೀಡುವ ಬಗ್ಗೆ ಅಭಿಪ್ರಾಯ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರು ಈಗಾಗಲೇ ಅಡ್ಡಮತದಾನ ಮಾಡಿರುವ ಬಗ್ಗೆ ಹಲವರಲ್ಲಿ ಹೇಳಿದ್ದು, ಉಳಿದ ಯಾರೊಬ್ಬರೂ ಈ ಬಗ್ಗೆ ಮಾತನಾಡಿಲ್ಲವಾದ್ದರಿಂದ ಪಕ್ಷದ ಪ್ರಮುಖರು ಎಲ್ಲರೂ ರಾಜಿನಾಮೆ ನೀಡುವಂತೆ ಈಗ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂತೂ ವಾರದೊಳಗೆ ಅಡ್ಡ ಮತದಾನ ಮಾಡಿದವರ ವಿರುದ್ಧ ಬಿಜೆಪಿ ಕ್ರಮಗೊಳ್ಳಲಿದೆಯೇ ಎಂಬ ಚರ್ಚೆ ಈಗ ಹೆಚ್ಚಾಗಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…