ಸುಳ್ಯ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಪ್ರತಿನಿಧಿಗಳು ಅಡ್ಡಮತದಾನ ಮಾಡಿ ಸಹಕಾರ ಭಾರತಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದು ಪಕ್ಷಕ್ಕೆ ತೀವ್ರ ಮುಜುಗರ ತಂದಿತ್ತು. ಈ ಹಿನ್ನಲೆಯಲ್ಲಿ ಪ್ರತಿನಿಧಿಗಳಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ ನೀಡಲಾಗಿತ್ತು. ಆದರೆ ಸರಿಯಾದ ಸಮಯಕ್ಕೆ ರಾಜಿನಾಮೆ ಸಲ್ಲಿಸದವರಿಗೆ ಈ ಬಾರಿಯ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ಮಂಡಲ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಡ್ಡಮತದಾನ ಮಾಡಿದ ಏಳು ಮಂದಿ ಯಾರು ಎಂದು ನಿಖರವಾಗಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ ನೀಡಲಾಗಿತ್ತು. ಆರು ಮಂದಿ ಸೂಕ್ತ ಸಮಯಕ್ಕೆ ರಾಜಿನಾಮೆ ನೀಡಿದ್ದರು. ಗ್ರಾಮ ಸಮಿತಿ ಒಪ್ಪಿದಲ್ಲಿ ಈ ಆರು ಮಂದಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಲಾಗುವುದು. ಉಳಿದವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಪಕ್ಷದ ಸೂಚನೆಯನ್ನು ತಿರಸ್ಕರಿಸಿದವರಿಗೆ ಯಾವುದೇ ಕಾರಣಕ್ಕೂ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಇರುವುದಿಲ್ಲ ಎಂದು ಹೇಳಿದರು. ಚುನಾವಣೆಯಲ್ಲಿ ಹಿನ್ನಡೆ ಆದರೂ ತೊಂದರೆ ಇಲ್ಲ, ಆದರೆ ಪಕ್ಷದ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿ ಕೆಲಸ ಮಾಡಿದವರನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಬಿಜೆಪಿ ಮುಖಂಡ ಸುದ್ದಿಗೋಷ್ಠಿಯಲ್ಲಿ ಎ.ವಿ.ತೀರ್ಥರಾಮ, ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಸಹಕಾರ ಭಾರತಿ ಸುಳ್ಯ ತಾಲೂಕು ಅಧ್ಯಕ್ಷ ಪ್ರವೀಣ್ ರಾವ್ ದೊಡ್ಡತೋಟ, ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…