ನವದೆಹಲಿ: ವರ್ಷಾಂತ್ಯದಲ್ಲಿ ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಒಬ್ಬರಿಗೆ ಒಂದೇ ಹುದ್ದೆ ನೀತಿಯಡಿ ತಾವು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಸ್ಥಾನವನ್ನು ತೊರೆಯುವ ಸುಳಿವು ನೀಡಿದ್ದಾರೆ.
ಡಿಸೆಂಬರ್ ವೇಳೆಗೆ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರು ಅಧಿಕಾರ ಸ್ವೀಕರಿಸುವುದು ಖಚಿತ ಎಂದು ಅಮಿತ್ ಷಾ ಸ್ಪಷ್ಟಪಡಿಸಿದ್ದಾರೆ. ನೇಪಥ್ಯದಲ್ಲಿ ನಿಂತು ಪಕ್ಷವನ್ನು ನಿಯಂತ್ರಿಸುವ ಸಾಧ್ಯತೆ ಇಲ್ಲ ಎಂದು ಹೇಳಿದ ಅವರು, 2014ರಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ತಾವು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲೂ ಇಂಥದ್ದೆ ಮಾತುಗಳು ಕೇಳಿ ಬರುತ್ತಿದ್ದವು. ಬಿಜೆಪಿ ಎಂಬುದು ಯಾರೋ ಒಬ್ಬರು ನೇಪಥ್ಯದಲ್ಲಿ ನಿಂತು ಮುನ್ನಡೆಸುವಂಥ ಪಕ್ಷವಲ್ಲ. ತಮ್ಮ ನಂತರದಲ್ಲಿ ಬೇರೊಬ್ಬರು ಪಕ್ಷದ ಸಾರಥ್ಯ ವಹಿಸಿಕೊಂಡ ಬಳಿಕ ಇಂಥ ಭಾವನೆಗಳು ತಮ್ಮಿಂತಾವೇ ದೂರವಾಗಲಿದೆ ಎಂದು ಹೇಳಿದ್ದಾರೆ. ಬಿಜೆಪಿಯ ಉನ್ನತ ಮೂಲಗಳ ಪ್ರಕಾರ ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.