ಡಿ ಕೆ ಶಿವಕುಮಾರ್ ಪ್ರಕರಣ : ಜಾರಿನಿರ್ದೇಶನಾಲಯ ಪರ ವಾದ ಮಂಡಿಸಿದವರು ಕೆ ಎಂ ನಟರಾಜ್

September 5, 2019
8:56 AM

ಬೆಂಗಳೂರು: ಅಕ್ರಮ ಹಣ ಪತ್ತೆ ಆರೋಪ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಕಸ್ಟಡಿಗೆ ವಹಿಸಲಾಗಿದೆ.

ಅಜಯ್ ಕುಮಾರ್ ಕುಹಾರ್ ನೇತೃತ್ವದ ಏಕಸದಸ್ಯ ಪೀಠ, ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ. ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದರೆ ಇಡಿ ಪರ ವಕೀಲ ಕೆ.ಎಂ.ನಟರಾಜ್ ಪ್ರತಿವಾದ ಮಂಡಿಸಿದರು. ಜೊತೆಗೆ ಇಲಾಖೆಯ ಅಧಿಕಾರಿಗಳ ವಶಕ್ಕೆ ಶಿವಕುಮಾರ್ ಅವರನ್ನು ನ್ಯಾಯಾಧೀಶರು ವಹಿಸುವಂತಹ ಖಡಕ್ ಪ್ರತಿವಾದ ಮಂಡಿಸುವಲ್ಲಿ ನಟರಾಜ್ ಯಶ್ವಸಿಯಾಗಿದ್ದಾರೆ.

ನಟರಾಜ್ ಪುತ್ತೂರಿನ ಈಶ್ವರಮಂಗಲದವರು:

ಕೆ.ಎಂ.ನಟರಾಜ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಈಶ್ವರಮಂಗಲದವರು. ವಕೀಲ ವೃತ್ತಿಯಲ್ಲಿ ಕಾರ್ಯ ಆರಂಭಿಸಿದ ಕೆ.ಎಂ.ನಟರಾಜ್ ಇಂದು ಉನ್ನತ ಹುದ್ದೆಯನ್ನು ಅಲಂಕರಿಸುವಲ್ಲಿ ಯಶ್ವಸಿಯಾಗಿದ್ದಾರೆ. 2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದ ಅವಧಿಯಲ್ಲಿ ಉಚ್ಛ ನ್ಯಾಯಾಲಯದ ವಿಶೇಷ ಅಭಿಯೋಜಕರಾಗಿ ಕಾರ್ಯನಿರ್ವಹಿಸಿದ ಕೆ.ಎಂ ನಟರಾಜ್, ದತ್ತ ಪೀಠ, ಚರ್ಚ್‍ಗಳ ಮೇಲಿನ ದಾಳಿ ಸೇರಿದಂತೆ ಹೈ ಟೆನ್ಷನ್ ಪ್ರಕರಣಗಳಲ್ಲಿ ಸರಕಾರದ ಪರ ವಾದ ಮಂಡಿಸಿದ್ದರು.

ಬಳಿಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಎನ್‍ಡಿಎ-1 ರ ಅವಧಿಯಲ್ಲಿ ಅಡಿಷನಲ್ ಸಾಲಿಸಿಟರ್ ಜನರಲ್ ಆಫ್ ಸುಪ್ರೀಕೋರ್ಟ್ ಫಾರ್ ಸೌತ್ ಇಂಡಿಯಾ ಹುದ್ದೆಯನ್ನು ಅಲಂಕರಿಸಿದರು. ಇದರಲ್ಲಿ ಪ್ರಮುಖವಾಗಿ ದಕ್ಷಿಣ ಭಾರತದ 6 ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕೇರಳ ರಾಜ್ಯಗಳ ಪ್ರಕರಣಗಳಲ್ಲಿ ಎನ್‍ಡಿಎ-1 ಪರ ನಟರಾಜ್ ವಾದ ಮಂಡಿಸುತ್ತಿದ್ದರು. ಕೆ.ಎಂ.ನಟರಾಜ್‍ರ ಕಾರ್ಯಕ್ಷಮತೆಯನ್ನು ಕಂಡ ಪ್ರಧಾನಿ ನರೇಂದ್ರ ಮೋದಿ, ನಟರಾಜ್‍ರನ್ನು ಎನ್‍ಡಿಎ-2 ರ ಅವಧಿಗೆ ಆಡಿಷನಲ್ ಸಾಲಿಸಿಟರ್ ಜನರಲ್ ಆಫ್ ಸುಪ್ರೀಂಕೋರ್ಟ್ ಫಾರ್ ಇಂಡಿಯಾ ಹುದ್ದೆ ನೀಡಿತ್ತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ
February 17, 2025
9:27 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ | ಸಚಿವ ಅಶ್ವಿನಿ ವೈಷ್ಣವ್
February 16, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror