ಸುಳ್ಯ: ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಮನ್ಯು ಸೂಕ್ತ ಹೋಮ (ಮಣಿ ಸೂಕ್ತ ಹವನ)ನಡೆಯಿತು.
ಬೆಳಿಗ್ಗೆ 10 ರಿಂದ ಆರಂಭಗೊಂಡ ಹೋಮ 12.30ರ ವೇಳೆಗೆ ಪೂರ್ಣಾಹುತಿ ನಡೆಯಿತು. ನಾರಾಯಣ ಅಸ್ರಣ್ಣ ಅವರ ನೇತೃತ್ವದಲ್ಲಿ ಹವನ ನಡೆಯಿತು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು, ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸಲಾಯಿತು.
ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಎಂ.ವೆಂಕಪ್ಪ ಗೌಡ, ಭರತ್ ಮುಂಡೋಡಿ, ಪ್ರಮುಖರಾದ ಪಿ.ಸಿ.ಜಯರಾಮ, ಗೀತಾ ಕೋಲ್ಚಾರ್, ದಿನೇಶ್ ಮಡ್ತಿಲ, ಸುಧೀರ್ ರೈ ಮೇನಾಲ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಆನಂದ ಬೆಳ್ಳಾರೆ, ಎಂ.ಬಿ.ಸದಾಶಿವ ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…