ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

October 15, 2019
3:20 PM

ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ.  ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.

Advertisement

ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group