ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.
ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…