ಡಿ.ವಿ.ಎಸ್‍ಗೆ ಮತ್ತೆ ಒಲಿದ ಸಚಿವ ಸ್ಥಾನ : ಹುಟ್ಟೂರಲ್ಲಿ ಸಂಭ್ರಮ

May 30, 2019
10:01 PM

ಸುಳ್ಯ:  ನರೇಂದ್ರ ಮೋದಿ ನೇತೃತ್ವದ ಎರಡನೇ ಎನ್.ಡಿ.ಎ ಸರಕಾರದಲ್ಲಿಯೂ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಡಿ.ವಿ.ಸದಾನಂದ ಗೌಡ ಅಧಿಕಾರ ವಹಿಸಿರುವುದರಿಂದ ಡಿವಿ ಹುಟ್ಟೂರಾದ ಸುಳ್ಯದಲ್ಲಿ ಸಂಭ್ರಮದ ವಾತಾವರಣ ಉಂಟಾಗಿದೆ.

ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಸಂಭ್ರಮ ಆಚರಿಸಿದರು. ಟೀಂ ಮೋದಿ ಸಚಿವ ಸಂಪುಟದಲ್ಲಿ ಎರಡನೇ ಬಾರಿಯೂ ಕ್ಯಾಬಿನೆಟ್ ಸಚಿವ ಪದವಿ ಪಡೆದು ಅಧಿಕಾರ ವಹಿಸಿದ ಸಂದರ್ಭದಲ್ಲಿ ಸದಾನಂದ ಗೌಡರ ತರವಾಡು ಮನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದಲ್ಲಿಯೂ ಸಂಭ್ರಮದ ಅಲೆಯೆಬ್ಬಿಸಿತು. ಪ್ರಥಮ ಮೋದಿ ಸರಕಾರಲ್ಲಿ ಐದು ವರ್ಷಗಳ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಸದಾನಂದ ಗೌಡರು ರೈಲ್ವೇ, ಕಾನೂನು, ಅಂಕಿ ಅಂಶ, ರಸಗೊಬ್ಬರ ಖಾತೆಗಳನ್ನು ನಿಭಾಯಿಸಿದ್ದರು. 2004ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ, 2009ರಲ್ಲಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಅವರು 2011ರಲ್ಲಿ ರಾಜ್ಯದ ಮುಖ್ಯಮಂತ್ರಿಯಾದರು. 2014 ಮತ್ತು 2019ರಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಲೋಕಸಭೆಗೆ ನಾಲ್ಕನೇ ಬಾರಿ ಆಯ್ಕೆಯಾದ ಡಿ.ವಿ.ಎಸ್ ಎರಡನೇ ಬಾರಿ ಕೇಂದ್ರ ಸಚಿವರಾಗಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror