ಸುಳ್ಯ: ನರೇಂದ್ರ ಮೋದಿ ನೇತೃತ್ವದ ಎರಡನೇ ಎನ್.ಡಿ.ಎ ಸರಕಾರದಲ್ಲಿಯೂ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಡಿ.ವಿ.ಸದಾನಂದ ಗೌಡ ಅಧಿಕಾರ ವಹಿಸಿರುವುದರಿಂದ ಡಿವಿ ಹುಟ್ಟೂರಾದ ಸುಳ್ಯದಲ್ಲಿ ಸಂಭ್ರಮದ ವಾತಾವರಣ ಉಂಟಾಗಿದೆ.
ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಸಂಭ್ರಮ ಆಚರಿಸಿದರು. ಟೀಂ ಮೋದಿ ಸಚಿವ ಸಂಪುಟದಲ್ಲಿ ಎರಡನೇ ಬಾರಿಯೂ ಕ್ಯಾಬಿನೆಟ್ ಸಚಿವ ಪದವಿ ಪಡೆದು ಅಧಿಕಾರ ವಹಿಸಿದ ಸಂದರ್ಭದಲ್ಲಿ ಸದಾನಂದ ಗೌಡರ ತರವಾಡು ಮನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದಲ್ಲಿಯೂ ಸಂಭ್ರಮದ ಅಲೆಯೆಬ್ಬಿಸಿತು. ಪ್ರಥಮ ಮೋದಿ ಸರಕಾರಲ್ಲಿ ಐದು ವರ್ಷಗಳ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಸದಾನಂದ ಗೌಡರು ರೈಲ್ವೇ, ಕಾನೂನು, ಅಂಕಿ ಅಂಶ, ರಸಗೊಬ್ಬರ ಖಾತೆಗಳನ್ನು ನಿಭಾಯಿಸಿದ್ದರು. 2004ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ, 2009ರಲ್ಲಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಅವರು 2011ರಲ್ಲಿ ರಾಜ್ಯದ ಮುಖ್ಯಮಂತ್ರಿಯಾದರು. 2014 ಮತ್ತು 2019ರಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಲೋಕಸಭೆಗೆ ನಾಲ್ಕನೇ ಬಾರಿ ಆಯ್ಕೆಯಾದ ಡಿ.ವಿ.ಎಸ್ ಎರಡನೇ ಬಾರಿ ಕೇಂದ್ರ ಸಚಿವರಾಗಿದ್ದಾರೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…