ಸುಳ್ಯ : ಕರ್ನಾಟಕ ರೈತ ಸಂಘ ಹಾಗು ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ಜಿಲ್ಲೆಯ ರೈತರ ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮತ್ತು ಹಕ್ಕೊತ್ತಾಯ ಸಭೆ ಡಿ.17 ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯಲಿದೆ. ಸುಳ್ಯ ತಾಲೂಕಿನಿಂದಲೂ ನೂರಾರು ಮಂದಿ ರೈತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರೈತ ಸಂಘ ಹಾಗು ಹಸಿರು ಸೇನೆಯ ಸುಳ್ಯ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಗೌಡ ನೆಡ್ಚಿಲು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರ ಘೋಷಣೆ ಮಾಡಿದ ಸಾಲ ಮನ್ನಾ ಯೋಜನೆಯಲ್ಲಿ ಅರ್ಹ ಫಲಾನುಭವಿ ರೈತರ ಖಾತೆಗೆ ತಕ್ಷಣ ಹಣ ಜಮೆ ಆಗಬೇಕು. 2017-18ನೇ ಸಾಲಿನ ಕೊಳೆ ರೋಗ ಪರಿಹಾರ ಜಮೆ ಮಾಡಬೇಕು. 2018-19 ನೇ ಸಾಲಿನಲ್ಲಿ ಕೊಳೆ ರೋಗದಿಂದ ಶೇ.40 ರಷ್ಟು ಅಡಿಕೆ ನಾಶವಾಗಿದೆ. ಇದಕ್ಕೆ ಪರಿಹಾರ ನೀಡಲು ತಕ್ಷಣ ಅರ್ಜಿ ಸ್ವೀಕರಿಸಬೇಕು, ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ತಕ್ಷಣ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳಬೇಕು. ಅಡಿಕೆ ಎಲೆ ಹಳದಿ ಬಾಧಿತ ಪ್ರದೇಶದ ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ವಿಶೇಷ ಪ್ಯಾಕೇಜ್ ನೀಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮಂಕಿ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಅನುಷ್ಠಾನ ಮಾಡಬೇಕು. ಅತಿವೃಷ್ಠಿ, ಅಕಾಲಿಕ ಮಳೆಯಿಂದ ಹಾನಿಗೊಳಗಾದ ಮನೆ, ಕಟ್ಟಡಗಳಿಗೆ, ಕೃಷಿ ನಾಶಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. 94 ಸಿ, 94ಸಿಸಿ ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿಗೆ ಸಮಿತಿ ರಚನೆ ಮಾಡಿ ಇತ್ಯರ್ಥ ಮಾಡಬೇಕು ಮತ್ತು ಇತ್ಯರ್ಥಗೊಂಡ ಅರ್ಜಿಗಳಿಗೆ ತಕ್ಷಣ ಹಕ್ಕು ಪತ್ರ ಮತ್ತು ಪಹಣಿ ನೀಡಬೇಕು. ಋಣ ಮುಕ್ತ ಕಾಯಿದೆ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಋಣ ಮುಕ್ತಗೊಳಿಸಲು ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತರಿ ಯೋಜನೆಗೆ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ರಬ್ಬರ್ ಬೆಲೆ ಕುಸಿತದಿಂದ ಕಂಗಾಲಾಗಿರುವ ರಬ್ಬರ್ ಬೆಳೆಗಾರರಿಗೆ ಕೇರಳ ಮಾದರಿಯಲ್ಲಿ ಬೆಂಬಲ ಬೆಲೆ ಘೋಷಿಸಬೇಕು. ಭತ್ತದ ಬೆಳೆಗೆ ಪ್ರೋತ್ಸಾಹ ನೀಡಬೇಕು, ನವಿಲು ಪಾರ್ಕ್ ರಚಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿರಿಸಿ ಪ್ರತಿಭಟನೆ ನಡೆಸಲಾಗುತಿದೆ ಎಂದು ಅವರು ಹೇಳಿದರು.
ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ, ತಾಲೂಕು ಕೋಶಾಧಿಕಾರಿ ದೇವಪ್ಪ ಗೌಡ ಕುಂದಲ್ಪಾಡಿ, ಸಂಚಾಲಕ ಸೆಬಾಸ್ಟಿಯನ್ ಮಡಪ್ಪಾಡಿ, ತೊಡಿಕಾನ ಅರಂತೋಡು ವಲಯ ಘಟಕದ ಅಧ್ಯಕ್ಷ ತೀರ್ಥರಾಮ ಗೌಡ ಉಳುವಾರು, ಐವರ್ನಾಡು ಘಟಕದ ಕಾರ್ಯದರ್ಶಿ ಜಯಪ್ರಕಾಶ್ ನೆಕ್ರಪ್ಪಾಡಿ, ಮೋಹನ್ ಅಡ್ತಲೆ ಉಪಸ್ಥಿತರಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು,…
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…