ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ ಡಿ.1ರಂದು ಬೆಳಗ್ಗೆ 9:00ರಿಂದ ನಗರದ ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ ಸೌಕಿನ್ ಶೆಟ್ಟಿ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜ, ಮಂಗಳೂರು ಮಹಾನಗರಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಅಪರಾಹ್ನ 4 ಗಂಟೆಗೆ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸುವರು. ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಶಾಸಕ ಯು.ಟಿ. ಖಾದರ್ , ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…