ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಶ್ರೀ ವನದುರ್ಗಾ ಮತ್ತು ಪರಿವಾರ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಡಿ.12ರಂದು ಬಿ.ಎಸ್.ಎನ್. ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೊಕುಲ್‌ದಾಸ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯುವುದು.
ಸಂಜೆ ಸಿರಿಕುರಲ್ ಗೆಳೆಯರ ಬಳಗ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯುವುದು ಎಂದು ಹೇಳಿದರು. ದೈವಸ್ಥಾನದ ಆಡಳಿತ ಮಂಡಳಿಯ ಸಂಚಾಲಕ ಅಶೋಕ್ ಪೀಚೆಮನೆ, ಪ್ರಧಾನ ಕಾರ್ಯದರ್ಶಿ ಜನಾರ್ದನ ಚೊಕ್ಕಾಡಿ, ಸುಚಿನ್ ಕಡ್ಯ, ಜಗನ್ನಾಥ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…