ಸುಳ್ಯ: ಪೆರುವಾಜೆ-ಮುಕ್ಕೂರು ಮೊಗೇರ ಗ್ರಾಮ ಸಮಿತಿ ಆಶ್ರಯದಲ್ಲಿ ನಾಲ್ಕನೇ ವರ್ಷದ ಮೊಗೇರ ಬಾಂಧವರ ಅಂತಾರಾಜ್ಯ ಕ್ರೀಡಾಕೂಟ ಡಿ.15 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.
ಪತ್ರಕರ್ತ ರಾಧಾಕೃಷ್ಣ ಕೆ ಉಳಿಯತ್ತಡ್ಕ ಉದ್ಘಾಟಿಸಲಿದ್ದಾರೆ. ಸಮಿತಿ ಅಧ್ಯಕ್ಷ ಪುರುಷೋತ್ತಮ ಕುಂಡಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಿಡಿಗೆರೆ ರಾಮಕ್ಕ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕೊರಪೋಳು ಜಯನಗರ, ಪೊಲೀಸ್ ಕಾನ್ಸ್ ಟೇಬಲ್ ಸುಂದರ ಮೊದಲಾದವರು ಭಾಗವಹಿಸಲಿದ್ದಾರೆ. ನಟ ರವಿ ರಾಮಕುಂಜ, ಮಧುಸೂದನ್ ಮುಂಡಾಜೆ, ನವ್ಯ ಬೊಮ್ಮಂತ್ತಗುಂಡಿ ಅವರನ್ನು ಸಮ್ಮಾನಿಸಲಾಗುವುದು. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.
ಈ ಸಂದರ್ಭ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು, ಅಂತಾರಾಜ್ಯ ಮಟ್ಟದ ಪುರುಷರ ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರ ತ್ರೋಬಾಲ್, ಹಗ್ಗಜಗ್ಗಾಟ ನಡೆಯಲಿದೆ. 50 ವರ್ಷದ ಮೇಲ್ಪಟ್ಟ ಹಿರಿಯರಿಗೆ ಸ್ಪರ್ಧೆಗಳು ನಡೆಯಲಿವೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.