ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪ್ರವರ್ತಿತ ಸುಳ್ಯ ತಾಲೂಕು ಭಜನಾ ಪರಿಷತ್ ಆಶ್ರಯದಲ್ಲಿ ಡಿ.15 ರಂದು ನಡೆಯಲಿರುವ ಭಜನೋತ್ಸವದ ಪೂರ್ವಭಾವಿ ಸಭೆಯು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.
ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಗೌರವಾಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಸುರೇಶ್ ಕಣೆಮರಡ್ಕ, ಮೋನಪ್ಪ ಗೌಡ ಬೊಳ್ಳಾಜೆ, ವಿಶ್ವನಾಥ ಸಂಪ,ಮೇಲ್ವಿಚಾರಕ ವಸಂತ್ ಉಪಸ್ಥಿತರಿದ್ದರು.
ಡಿ.15 ರಂದು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳನ್ನು ಒಟ್ಟು ಸೇರಿಸಿ ಒಂದು ದಿನದ ಕಾರ್ಯಕ್ರಮ ನಡೆಸುವುದಾಗಿ ತೀರ್ಮಾನಿಸಲಾಯಿತು. ಭಜನಾ ತರಬೇತಿ ಮತ್ತು ಕುಣಿತ ಭಜನೆಯ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ನೀಡುವ ಬಗ್ಗೆ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಭಜನೋತ್ಸವ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ವಿಶ್ವನಾಥ ಸಂಪ, ಕಾರ್ಯದರ್ಶಿ ವಸಂತ್, ಉಪಾಧ್ಯಕ್ಷ ರಾಗಿ ಶಿವಾನಂದ ಕಿಣಿ ಸುಬ್ರಹ್ಮಣ್ಯ, ವಸಂತ್ ಹುದೇರಿ, ಕೋಶಾಧಿಕಾರಿ ರಾಜೇಶ್ ಕುದ್ವ, ಜತೆ ಕಾರ್ಯದರ್ಶಿ ಮೋನಪ್ಪ ಗೌಡ ಬೊಳ್ಳಾಜೆ ಇವರುಗಳನ್ನು ಅಧ್ಯಕ್ಷರ ಸಲಹೆಯಂತೆ ಆಯ್ಕೆ ಮಾಡಲಾಯಿತು.
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…