ಡಿ.19 ರಿಂದ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

November 15, 2019
10:52 PM

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ‌ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು. ಊರಿನ ಹಿರಿಯರಾದ ಗೆಜ್ಜೆ ತಿಮ್ಮಪ್ಪ ಗೌಡ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

 

ಬಳಿಕ ಬೈಲುವಾರು ಸಭೆ  ನಡೆಯಿತು. ಸಭೆಯಲ್ಲಿ  ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನ , ಚಪ್ಪರ ಮುಹೂರ್ತ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಆರ್ಥಿಕ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಕುಳ, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ನ.24 ರಂದು ಚಪ್ಪರ ಮುಹೂರ್ತ ನಡೆಯಲಿದೆ. ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror