ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು. ಊರಿನ ಹಿರಿಯರಾದ ಗೆಜ್ಜೆ ತಿಮ್ಮಪ್ಪ ಗೌಡ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಬಳಿಕ ಬೈಲುವಾರು ಸಭೆ ನಡೆಯಿತು. ಸಭೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನ , ಚಪ್ಪರ ಮುಹೂರ್ತ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಆರ್ಥಿಕ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಕುಳ, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನ.24 ರಂದು ಚಪ್ಪರ ಮುಹೂರ್ತ ನಡೆಯಲಿದೆ. ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.