ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಭಾನುವಾರ ಚಪ್ಪರ ಮುಹೂರ್ತ ನಡೆಯಿತು. ಊರಿನ ಹಿರಿಯರಾದ ಶೀನಪ್ಪ ಗೌಡ ಎರುಂಬಿಲ ಚಪ್ಪರ ಮುಹೂರ್ತ ನೆರವೇರಿಸಿದರು. ಬಳಿಕ ಧಾರ್ಮಿಕ ಉತ್ಸವ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು. ಜಾತ್ರಾ ಉತ್ಸವದ ಸಿದ್ಧತೆಗಳು ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನದ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಕೋಶಾಧಿಕಾರಿ ಮುರಳಿ ಕಾಮತ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ ರೈ ಅರ್ಗುಡಿ ಸೇರಿದಂತೆ ವಿವಿಧ ಸಮಿತಿ ಸಂಚಾಲಕರುಗಳು, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನ.26 ರಂದು ಮಂಗಳವಾರ ರಾತ್ರಿ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ನಡೆಯಲಿದೆ ಎಂದು ಇದೇ ವೇಳೆ ಭಕ್ತಾದಿಗಳಿಗೆ ಮಾಹಿತಿ ನೀಡಲಾಯಿತು.
ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.
Advertisement
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.