Advertisement
ಧಾರ್ಮಿಕ

ಡಿ.2: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

Share

ಸವಣೂರು : ಪುತ್ತೂರು ತಾಲೂಕಿನಲ್ಲಿ ವಲ್ಮೀಕ (ಹುತ್ತ)ಕ್ಕೆ ಪೂಜೆ ಸಲ್ಲಿಸುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.1 ಮತ್ತು ಡಿ.2 ರಂದು ನಡೆಯಲಿದೆ.

ಡಿ.1ರ ರಾತ್ರಿ 7 ಕ್ಕೆ ವಿಶೇಷ ಕಾರ್ತಿಕ ಪೂಜೆ ನಡೆಯಲಿದೆ. ಡಿ.2ರಂದು ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ , ಮದ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ಹೂವಿನ ಪೂಜೆ, ವಿಶೇಷ ಪೂಜೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ವಿಶೇಷತೆ: ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 minutes ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

21 minutes ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

16 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago