ಸುಳ್ಯ: ಸುಳ್ಯದ ಅಮರಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನಾಚರಣೆಯ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಡಿ.24ರಿಂದ 26ರವರೆಗೆ ಕೆವಿಜಿ ಸುಳ್ಯ ಹಬ್ಬ ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.24ರಂದು ಸಂಜೆ 7.00ರಿಂದ ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್ ಇವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ಲೀಗ್ ಮಾದರಿಯ ಲಗೋರಿ ಪಂದ್ಯಾಟ, ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಹಾಕಿರುವ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಡಿ.25 ರಂದು ಪೂರ್ವಾಹ್ನ ಗಂಟೆ 9.30ಕ್ಕೆ ತಾಲೂಕು ಮಟ್ಟದ ಕ್ರೀಡಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ. ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೊಸಿಯೇಶನ್ ವತಿಯಿಂದ ಸುಳ್ಯ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ. ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಗಿದೆ. ಸಂಜೆ 7ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಪುತ್ತೂರು ಶಾಸಕ ಸಂಜೀವ ಮಠಂದೂರು ಸಾಧಕರನ್ನು ಸನ್ಮಾನಿಸುವರು.
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಮುಖ್ಯ ಅತಿಥಿಗಳಾಗಿರುತ್ತಾರೆ. ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರಾದ ಪದ್ಮಾರಂಗನಾಥ, ಡಾ.ಮಾಧವ ಪೆರಾಜೆ, ಡಾ.ರಂಗನಾಥ್, ಕೆ.ರಾಮಚಂದ್ರ ಭಟ್, ಸಿಂಚನಾ ಡಿ. ಗೌಡ ಅವರನ್ನು ಸನ್ಮಾನಿಸಲಾಗುವುದು. ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನವಾದ ಡಿ.26 ರಂದು ಸಂಜೆ 7.00 ಗಂಟೆಗೆ ಕೆ.ವಿ.ಜಿ. ಸಂಸ್ಮರಣೆ ಮತ್ತು ಕೆ.ವಿ.ಜಿ. ಸಾಧನಾಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ. ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸುವರು. ವಿಲಿಯಂ ಲಸ್ರಾದೋ ಹಾಗೂ ರಾಘವ ಗೌಡ ಪಲ್ಲತ್ತಡ್ಕ ಅವರಿಗೆ ಕೆ.ವಿ.ಜಿ. ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಉಪಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಪ್ರಶಸ್ತಿ ಪ್ರಧಾನ ಮಾಡುವರು. ಸುಳ್ಯ ಶಾಸಕ ಎಸ್.ಅಂಗಾರ ಅತಿಥಿಗಳಾಗುವರು. ಉಪನ್ಯಾಸಕ ಡಾ.ಪೂವಪ್ಪ ಕಣಿಯೂರು ಕೆ.ವಿ.ಜಿ. ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.
ಕೆ.ವಿ.ಜಿ ಸುಳ್ಯ ಹಬ್ಬದ ಅಂಗವಾಗಿ ವೈದ್ಯಕೀಯ ತಪಾಸಣೆ ಹಾಗೂ ಮಾಹಿತಿ ಶಿಬಿರ, ಫುಟ್‍ಬಾಲ್, ಬ್ಯಾಡ್‍ಮಿಂಟನ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ಡಾ. ಕುರುಂಜಿ ವೆಂಕಟ್ರಮಣ ಗೌಡರವರಿಂದ ಸುಳ್ಯದ ಅಭಿವೃದ್ಧಿ ಮತ್ತು ಕೊಡುಗೆಗಳ ಬಗ್ಗೆ ವಿಚಾರ ವಿನಿಮಯ ಕಾರ್ಯಕ್ರಮ ಡಿ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಶೈಲೇಶ್ ಅಂಬೆಕಲ್ಲು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಜಯಂತ ರೈ, ಗಂಗಾಧರ ಮಟ್ಟಿ, ಹರೀಶ್ ಬಂಟ್ವಾಳ್ ಇದ್ದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…