ಸವಣೂರು : ಕೊಳ್ತಿಗೆ ಗ್ರಾಮದ ಮಣಿಕ್ಕಾರ ಪಾಲ್ತಾಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವವು ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದದಲ್ಲಿ ಡಿ.28 ಮತ್ತು ಡಿ.29 ರಂದು ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಡಿ.28ರಂದು ಬೆಳಿಗ್ಗೆ 8.30ಕ್ಕೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಪಂಚವಿಂಶಮಿ ಕಲಶ ಪೂಜೆ, ನಾಗ ಸಾನಿದ್ಯದಲ್ಲಿ ತಂಬಿಲ ಸೇವೆ, ದೈವದ ಸಾನಿದ್ಯದಲ್ಲಿ ತಂಬಿಲ ಸೇವೆ, ಮದ್ಯಾಹ್ನ ಶ್ರೀದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ರಕ್ತೇಶ್ವರಿ ದೈವದ ಭಂಡಾರ ತೆಗೆಯುವುದು, ರಾತ್ರಿ 7.30ಕ್ಕೆ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, 8.30ಕ್ಕೆ ರಕ್ತೇಶ್ವರಿ ದೈವದ ನೇಮ ನಡೆಯಲಿದೆ.
ಡಿ.29ರಂದು ಬೆಳಿಗ್ಗೆ 7 ಗಂಟೆಗೆ ಉಳ್ಳಾಕುಲು ದೈವದ ನೇಮ, ನಂತರ ಮಹಿಷಂತಾಯ ದೈವದ ನೇಮ, ಮದ್ಯಾಹ್ನ ಹುಲಿಭೂತ ದೈವದ ನೇಮ, ಸಂಜೆ ಪಂಜುರ್ಲಿ ದೈವದ ನೇಮ, ಗುಳಿಗ ದೈವದ ನೇಮ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎಂ.ಗೋಪಾಲಕೃಷ್ಣ ಶ್ಯಾನುಬೋಗ್ ,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಾಲ್ತಾಡು ನಾರಾಯಣ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…