ಸುಳ್ಯ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ, ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ, ಎಂ.ಬಿ.ಫೌಂಡೇಶನ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಡಿ.7 ರಂದು ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ನಡೆಯಲಿದೆ ಎಂದು ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ ಹೇಳಿದರು.
ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಯಮುನಾ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಎಒಎಲ್ಇ ಯ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ, ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ನ.ಪಂ.ಸದಸ್ಯ ವಿನಯಕುಮಾರ್ ಕಂದಡ್ಕ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಸರಕಾರ ನೀಡಿದ ತ್ರಿಚಕ್ರ ವಾಹನ ಸವಾರರಿಂದ ಮೆರವಣಿಗೆ, ಸಭಾ ಕಾರ್ಯಕ್ರಮ, ವಿಶಿಷ್ಟ ಸಾಧಕ ವಿಕಲಚೇತನರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ, ನೂತನ ಗುರುತು ಚೀಟಿ ನೀಡುವ ಕಾರ್ಯಕ್ರಮ, ವಿಶೇಷ ಮಕ್ಕಳ ಮನರಂಜನೆಗಾಗಿ ತಿರುಗುವ ಕುದುರೆ, ಜಂಪಿಂಗ್ ಬಾಲ್ ಮುಂತಾದ ವಿಶಿಷ್ಟ ಮನೋಲ್ಲಾಸ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪುಟ್ಟಣ್ಣ ವಲಿಕಜೆ, ಕಾರ್ಯದರ್ಶಿ ಪ್ರವೀಣ್ ನಾಯಕ್, ತಾ.ಪಂ.ತಾಲೂಕು ವಿವಿಧೋದ್ದೇಶ ಕಾರ್ಯಕರ್ತ ಚಂದ್ರಶೇಖರ್ ಬಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…