ಡಿ.14 ಮತ್ತು 15 ಇಂಟರ್ಯಾಕ್ಟ್ ಕ್ಲಬ್‍ಗಳ ಜಿಲ್ಲಾ ಸಮಾವೇಶ

December 9, 2019
9:49 PM

ಸುಳ್ಯ: ಸುಳ್ಯದ ರೋಟರಿ ಕ್ಲಬ್, ರೋಟರಿ ಕ್ಲಬ್ ಸುಳ್ಯ ಸಿಟಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಇಂಟರಾಕ್ಟ್ ಕ್ಲಬ್ ಗಳ ಜಿಲ್ಲಾ ಸಮಾವೇಶ-`ಚಿನ್ನಾರಿ’ ಡಿ.14 ಮತ್ತು 15 ರಂದು ಮಿತ್ತಡ್ಕದ ರೋಟರಿ ವಿದ್ಯಾಸಂಸ್ಥೆಗಳ ವಠಾರದಲ್ಲಿ ನಡೆಯಲಿದೆ.

Advertisement
Advertisement

ದ.ಕ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರೋಟರಿ ಕ್ಲಬ್ ಮತ್ತು ಇಂಟರಾಕ್ಟ್ ಕ್ಲಬ್‍ಗಳ ಸುಮಾರು 700 ರಷ್ಟು ರೊಟೇರಿಯನ್ನರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಪಾಲ್ಗೊಳ್ಳಲಿರುವ ಈ ಸಮಾವೇಶದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದೆ. `ಮಿಸೆಸ್ ಕರ್ನಾಟಕ’ ಪ್ರಶಸ್ತಿ ವಿಜೇತೆ ದೀಪಿಕಾ ಅಡ್ತಲೆ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲಾ ಸ್ಪೋರ್ಟ್ಸ್ ಚೇರ್‍ಮನ್ ವಿಶ್ವಾಸ್ ಶೆಣೈ ಮತ್ತು ಜಿಲ್ಲಾ ಇಂಟರಾಕ್ಟ್ ಸಭಾಪತಿ ಡಾ.ಸೂರ್ಯನಾರಾಯಣ ಕೆ ಅತಿಥಿಗಳಾಗಿರುತ್ತಾರೆ. ಬಳಿಕ ಅತಿಥೇಯ ರೋಟರಿ ವಿದ್ಯಾಸಂಸ್ಥೆಗಳ ಇಂಟರಾಕ್ಟ್ ಸದಸ್ಯರಿಂದ ಉದ್ಘಾಟನಾ ಸಾಂಸ್ಕ್ರತಿಕ ಪ್ರದರ್ಶನ, ಸಾಂಸ್ಕ್ರತಿಕ ಸ್ಪರ್ಧೆಗಳು ನಡೆಯಲಿವೆ.

ಡಿ.15ರಂದು ಬೆಳಿಗ್ಗೆ ರೋಟರಿ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯೂ ಸಮಾವೇಶವನ್ನು ಉದ್ಘಾಟಿಸುವರು. ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿ ತುಷಾರ್ ಕೆ , ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ, ಮುಂದಿನ ಸಾಲಿನ ಜಿಲ್ಲಾ ಗವರ್ನರ್ ರವೀಂದ್ರ ಭಟ್, ವಲಯ 5 ರ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ ಕೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ವಿಚಾರ ಗೋಷ್ಟಿಗಳು ನಡೆಯಲಿದೆ. `ವ್ಯಕ್ತಿತ್ವ ವಿಕಸನ ಹಾಗೂ ಸಂವಹನ ಕಲೆ’ ವಿಷಯವಾಗಿ ರಾಷ್ಟ್ರೀಯ ತರಬೇತುದಾರರಾದ ಎಂ.ಬಿ. ಜಯರಾಮ ಮಾಹಿತಿ ನೀಡಲಿದ್ದಾರೆ. `ಯುವಜನತೆಯ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ’ ಈ ಕುರಿತು ಪತ್ರಕರ್ತ ಹರಿಪ್ರಸಾದ್ ಅಡ್ಪಂಗಾಯ, `ಸ್ಪರ್ಧಾತ್ಮಕ ಸವಾಲುಗಳನ್ನು ಎದುರಿಸುವುದು ಹೇಗೆ’ ಎಂಬ ವಿಚಾರವಾಗಿ ಜೈ ಮನೋಜ್ ಗೌಡ ವಿಚಾರ ಮಂಡಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‍ನ ನಿರ್ದೇಶಕ ಅಕ್ಷಯ್.ಕೆ.ಸಿ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ರಂಗನಾಥ್ ಭಟ್ ಹಾಗೂ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಮುಖ್ಯ ಅತಿಥಿಗಳಾಗಿರುತ್ತಾರೆ ಎಂದು ಸಮಾವೇಶದ ಸಂಯೋಜಕ ಎನ್.ಎ.ಜಿತೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group