ಡೆಂಘೆ ಜ್ವರಕ್ಕೆ 24/7 ಸೇವೆ ಗುತ್ತಿಗಾರಿನಲ್ಲಿ ಅಗತ್ಯ

July 10, 2019
2:56 PM

ಗುತ್ತಿಗಾರು: ಗುತ್ತಿಗಾರು ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಘೆ  ಹಾಗೂ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಂಡುಬರುತ್ತಿರುವುದರಿಂದ ಪ್ರಾ.ಆ.ಕೇಂದ್ರದಲ್ಲಿ 24/7ರ ನಿರಂತರ ಸೇವೆ ನೀಡುವಂತೆ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಲು ಗುತ್ತಿಗಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆಯಲ್ಲಿ  ನಿರ್ಧರಿಸಲಾಗಿದೆ. ತುರ್ತು ಚಿಕಿತ್ಸೆಗಾಗಿ ರಾತ್ರಿವೇಳೆ ಹತ್ತಿರದಲ್ಲಿ ಆಸ್ಪತ್ರೆಗಳು ಇಲ್ಲದಿರುವುದರಿಂದ ಇದಕ್ಕಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಲು ಇಲಾಖೆಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

Advertisement
Advertisement

ಗ್ರಾ.ಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರು ಅಧ್ಯಕ್ಷತೆಯಲ್ಲಿ ನಡೆದ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ ನಡೆಯಿತು.  ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲೆಹೊರೆ ಸಾಮಗ್ರಿಗಳನ್ನು ಹೊತ್ತು ಬರುವ ವ್ಯಾಪಾರಿಗಳು ಕಡ್ಡಾಯವಾಗಿ ಪಂಚಾಯತ್ ಅನುಮತಿ ಪಡೆದುಕೊಳ್ಳುವಂತೆ ಗುತ್ತಿಗಾರು ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

Advertisement

ಪಂಜದಲ್ಲಿ ಕಾರ್ಯಾಚರಿಸುತ್ತಿರುವ ನಾಡೆಕಚೇರಿಯನ್ನು ಗುತ್ತಿಗಾರಿಗೆ ವರ್ಗಾಯಿಸಲು ಕಂದಾಯ ಇಲಾಖೆಗೆ ಸೂಚಿಸುವುದಾಗಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕಲ್ಮಕಾರು, ಕೊಲ್ಲಮೊಗ್ರ, ಹರಿಹರ ಪಲ್ಲತ್ತಡ್ಕ ಸೇರಿದಂತೆ ಪಂಜ ಹೋಬಳಿಯ ಗ್ರಾಮಗಳಿಗೆ ಗುತ್ತಿಗಾರು ಅತ್ಯಂತ ಹತ್ತಿರದ ವ್ಯಾವಹಾರಿಕ ಕೇಂದ್ರವಾಗಿರುವುದರಿಂದ ಪಂಜ ನಾಡಕಚೇರಿಯನ್ನು ಗುತ್ತಿಗಾರಿಗೆ ವರ್ಗಾಯಿಸಬೇಕು. ಪಂಜ ಕಡಬ ತಾಲೂಕು ವ್ಯಾಪ್ತಿಗೆ ಬರುವುದರಿಂದ ಈ ನಿರ್ಧಾರ ಅವಶ್ಯಕ ಎಂದು ಸಭೆಯಲ್ಲಿ ಅಧ್ಯಕ್ಷ ಅಚ್ಯುತ ಗುತ್ತಿಗಾರು ಹೇಳಿದರು.

ಸುಳ್ಯ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನ ಸಭೆಯ ಉಸ್ತುವಾರಿ ವಹಿಸಿದ್ದರು.

Advertisement

ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ, ಸದಸ್ಯರಾದ ವೆಂಕಟ್ ವಳಲಂಬೆ, ರಾಕೇಶ್ ಮೆಟ್ಟಿನಡ್ಕ, ವಿಜಯಕುಮಾರ್ ಚಾರ್ಮತ, ಮಿತ್ರಕುಮಾರಿ, ಶ್ರೀದೇವಿ, ಅಮ್ಮಣಿ, ರತ್ನಾವತಿ, ರಘುವೀರ, ಜಯಪ್ರಕಾಶ್, ಯಮಿತಾ, ಶಶಿಕಲಾ, ಜಿ.ಪಂ ಇಂಜಿನಿಯರ್ ಮಣಿಕಂಠನ್, ವೈದ್ಯಾಧಿಕಾರಿ ಚೈತ್ರಾಭಾನು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ವಿಜಯ, ಉದ್ಯೋಗ ಖಾತರಿ ಇಂಜಿನಿಯರ್ ಪ್ರಜ್ವಲ್, ಕಂದಾಯ ಇಲಾಖೆಯ ಭಾರತಿ, ಸಿದ್ದಪ್ಪ, ಅರಣ್ಯ ಇಲಾಖೆಯ ಮನೋಜ್ ಸೇರಿದಂತೆ ವಿವಿಧ ಇಲಾಖಾ ಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು.

ಪಂ.ಅಭಿವೃದ್ಧಿ ಅಧಿಕಾರಿ ಶ್ಯಾಂ ಪ್ರಸಾದ್ ಎಂ.ಆರ್ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?
May 17, 2024
11:32 AM
by: ದ ರೂರಲ್ ಮಿರರ್.ಕಾಂ
ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |
May 17, 2024
11:12 AM
by: ದ ರೂರಲ್ ಮಿರರ್.ಕಾಂ
ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ
May 17, 2024
10:54 AM
by: ದ ರೂರಲ್ ಮಿರರ್.ಕಾಂ
ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror