Advertisement
ಸುದ್ದಿಗಳು

ಡೆಂಘೆ-ಮಲೇರಿಯಾ ವಿರುದ್ದ ಜನಜಾಗೃತಿ “ಡ್ರೈವ್ ಡೇ ಅಭಿಯಾನ”

Share

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಜೆಸಿಐ ಬೆಳ್ಳಾರೆ ಹಾಗೂ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಸಹಭಾಗಿತ್ವದಲ್ಲಿ ಡೆಂಘೆ, ಮಲೇರಿಯಾ ವಿರುದ್ಧ ಸಾರ್ವಜನಿಕರಿಗೆ ಅರಿವು ನೀಡುವ ಹಾಗೂ ‘ಡ್ರೈವ್ ಡೇ’ ವಿಶೇಷ ಅಭಿಯಾನ ಕಾರ್ಯಕ್ರಮವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.

Advertisement
Advertisement

ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವತೀ ಮಾತನಾಡಿ ಡೆಂಘೆ , ಮಲೇರಿಯಾ ಇನ್ನಿತರ ಮಾರಕ ಕಾಯಿಲೆಗಳು ಹರಡದಂತೆ ಪ್ರತಿ ಮನೆ, ಅಂಗಡಿ ಹಾಗೂ ನಿರ್ಮಾಣ ಹಂತದ ಕಟ್ಟಡಗಳಲ್ಲಿ ನೀರು ಶೇಖರಣೆಗೊಳ್ಳದಂತೆ ಜಾಗೃತಿ ವಹಿಸುವಂತೆ ಮನವಿ ಮಾಡಿದರು. ಇಂತಹ ಪ್ರದೇಶದಲ್ಲಿ ಲಾರ್ವಗಳು ಉತ್ಪತ್ತಿಗೊಂಡು ಕಾಯಿಲೆಗಳು ಹಬ್ಬಲು ಸಹಕಾರಿಯಾಗುತ್ತದೆ. ಇದಕ್ಕೆ ಪರಿಹಾರ ಎಂಬಂತೆ, ಸ್ವಚ್ಛತೆ ಕಾಯ್ದುಗೊಳ್ಳುವುದು ಎಂದರಲ್ಲದೆ, ಜ್ವರಭಾದೆ ಕಾಣಿಸಿಕೊಂಡಲ್ಲಿ ವಿಳಂಬ ಮಾಡದೆ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ನುಡಿದರು.

Advertisement

ಸಭಾಧ್ಯಕ್ಷತೆ ವಹಿಸಿ, ಸ್ವಾಗತಿಸಿದ ರೋಟರಿ ಕ್ಲಬ್ ಬೆಳ್ಳಾರೆ ಟೌನ್‍ನ ಅಧ್ಯಕ್ಷ ಬಿ. ನರಸಿಂಹ ಜೋಶಿ ಮಾತನಾಡಿ ದೇಶದಲ್ಲಿ ಪೋಲಿಯೋ ನಿರ್ಮೂಲನೆಗೊಳಿಸಿದಂತೆ ಡೆಂಘೆ ಇನ್ನಿತರ ಮಾರಕ ಕಾಯಿಲೆಯ ವಿರುದ್ಧ ಜನಜಾಗೃತಿ ಮೂಡಿಸಿಕೊಂಡು ಕಾರ್ಯಚರಣೆ ನಡೆಸಿ, ಕಾಯಿಲೆ ಹಬ್ಬದಂತೆ ತಡೆಯಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಬೆಳ್ಳಾರೆಯ ಉಪಾಧ್ಯಕ್ಷ ಮಹಮ್ಮದ್ ಮುಸ್ತಾಫ, ಬೆಳ್ಳಾರೆ ಜೆ.ಸಿ.ಐ.ಯ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಬೆಳ್ಳಾರೆ ಪೇಟೆಯ ಬಸ್‍ಸ್ಟಾಂಡ್ ಬಳಿ ತೆರಳಿ ಸೊಳ್ಳೆಗಳು ಹರಡದಂತೆ ಪರಿಸರ ಸ್ವಚ್ಛತೆ, ನೀರು ಶೇಖರಣೆಗೊಳ್ಳದಂತೆ ಕ್ರಮ ಕೈಗೊಳ್ಳುವಂತೆ ಅಂಗಡಿ ವ್ಯವಹಾರಸ್ಥರಿಗೆ, ಪ್ರಯಾಣಿಕರಿಗೆ ಅರಿವು ನೀಡಿದರು.

Advertisement

ಈ ಕಾರ್ಯಾಚರಣೆಯಲ್ಲಿ ರೋಟರಿಯ ಝೋನಲ್ ಲೆಪ್ಟಿನೆಂಟ್ ಪ್ರಭಾಕರ ಆಳ್ವ ಬಜನಿಗುತ್ತು ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ, ರವೀಂದ್ರ ಗೌಡ ಯಂ., ವೆಂಕಪ್ಪ ಗೌಡ ಎನ್. ಎಸ್., ಐತ್ತಪ್ಪ ಗೌಡ ಕಾವಿನಮೂಲೆ, ಸೀತಾರಾಮ ನೆಟ್ಟಾರು, ಆಸ್ಪತ್ರೆಯ ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು ಭಾಗವಹಿಸಿ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

14 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

16 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago