ಮಡಿಕೇರಿ : ಜಿಲ್ಲೆಯಲ್ಲಿ ಜುಲೈ 20 ರಿಂದ 23 ರ ವರೆಗೆ 204 ಮಿ.ಮೀ ಗಿಂತ ಹೆಚ್ಚು (ರೆಡ್ ಅಲರ್ಟ್) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08272-221077 ಹಾಗೂ ವಾಟ್ಸ್ ಆಪ್ ಸಂಖ್ಯೆ 8550001077 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಎಲ್ಲಾ ಇಲಾಖೆಯ ಅಧಿಕಾರಿಗಳು ಎನ್ ಡಿ ಆರ್ ಡಿಫ್ ತಂಡದ ಸಹಕಾರದೊಂದಿಗೆ ಮಳೆಯ ಸಂದರ್ಭ ಸಾರ್ವಜನಿಕರ ನೆರವಿಗೆ ಧಾವಿಸಬೇಕು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.
ಈ ಹಿಂದೆ ಜು.18 ರಿಂದಲೇ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತಾದರೂ ಸಾಧಾರಣ ಮಳೆಯಷ್ಟೇ ಸುರಿದಿದೆ. ಗುರುವಾರ ರಾತ್ರಿ ಮಡಿಕೇರಿಗೆ ಒಂದೂವರೆ ಇಂಚಿನಷ್ಟು ಮಳೆಯಾಗಿದೆ. ಕೊಡಗು-ಕೇರಳ ಗಡಿಭಾಗದ ಕರಿಕೆ ಗ್ರಾಮದಲ್ಲಿ ಗಾಳಿ ಮಳೆಯಾಗಿದ್ದು, ಕೆಲವು ಮರಗಳು ಧರೆಗುರುಳಿ ಹಾನಿಯಾದ ಘಟನೆ ನಡೆದಿದೆ. ಆದರೆ ಜಿಲ್ಲೆಯ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದು, ಶುಕ್ರವಾರ ಬೆಳಗ್ಗಿನಿಂದಲೇ ತುಂತುರು ಮಳೆಯಾಗುತ್ತಿದ್ದು, ಚಳಿಯ ವಾತಾವರಣವಿದೆ.
ಕರಾವಳಿ ಭಾಗದಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಲವು ಗಂಟೆ ತಡವಾಗಿಯಾದರೂ ಕೊಡಗಿಗೆ ಭಾರೀ ಮಳೆಯ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.
ಕೊಡಗು ಮಳೆ ವಿವರ :
ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 16.22 ಮಿ.ಮೀ. ಕಳೆದ ವರ್ಷ ಇದೇ ದಿನ 38.04 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 734.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2274.87 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.85 ಮಿ.ಮೀ. ಕಳೆದ ವರ್ಷ ಇದೇ ದಿನ 71.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 946.70 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3162.06 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 6 ಮಿ.ಮೀ. ಕಳೆದ ವರ್ಷ ಇದೇ ದಿನ 17.48 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 828.22 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1890.96 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.80 ಮಿ.ಮೀ. ಕಳೆದ ವರ್ಷ ಇದೇ ದಿನ 24.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 428.08 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1771.58 ಮಿ.ಮೀ. ಮಳೆಯಾಗಿತ್ತು.
ಹಾರಂಗಿ ಜಲಾಶಯದ ನೀರಿನ ಮಟ್ಟ :
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2821.09 ಅಡಿಗಳು, ಕಳೆದ ವರ್ಷ ಇದೇ ದಿನ 2857.78 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 3.20 ಮಿ.ಮೀ., ಕಳೆದ ವರ್ಷ ಇದೇ ದಿನ 12.20 ಮಿ.ಮೀ. ಇಂದಿನ ನೀರಿನ ಒಳಹರಿವು 1150 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 14465 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 8650, ನಾಲೆಗೆ 450 ಕ್ಯುಸೆಕ್.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…