ಸುಳ್ಯ: ನಿರಂತರ ಆರು ಬಾರಿ ಶಾಸಕರಾಗಿ ಆಯ್ಕೆಯಾದರೂ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನ ತಪ್ಪಿಸರುವುದರ ವಿರುದ್ಧ ವಿವಿಧ ಭಾಗಗಳಿಂದ ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ಮಾತ್ರವಲ್ಲದೆ ಜೆಡಿಎಸ್, ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ ಸೇರಿದಂತೆ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವಿಚಾರದಲ್ಲಿ ಸುಳ್ಯದ ಜನತೆ ಒಕ್ಕೊರಲಿಂದ ಬೇಡಿಕೆ ಇಟ್ಟಿರುವುದಲ್ಲದೆ ಪಕ್ಷಗಳು ಕೂಡ ಬಲು ಅಪರೂಪದ ರಾಜಕೀಯ ಐಕ್ಯತೆಯನ್ನು ತೋರ್ಪಡಿಸಿದೆ. ಅಂಗಾರ ಸಚಿವರಾಗುವವರೆಗೆ ಪಕ್ಷದ ಎಲ್ಲಾ ಚಟುವಟಿಕೆಗಳನ್ನೂ ಸ್ಥಗಿತ ಮಾಡುವುದಾಗಿ ಬಿಜೆಪಿ ಘೋಷಿಸಿದರೆ, ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಈ ವಿಚಾರದಲ್ಲಿ ಪಕ್ಷದ ಧ್ವಜವನ್ನು ಮನೆಯಲ್ಲಿಟ್ಟು ಎಲ್ಲರ ಜೊತೆ ಸೇರಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಜೆಡಿಎಸ್ ಘೋಷಿಸಿದೆ. ಸಚಿವ ಸ್ಥಾನ ನೀಡದ ಬಗ್ಗೆ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ ಮುಖಂಡರು ಕಟುವಾಗಿ ಟೀಕಿಸಿದ್ದಾರೆ. ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕೂಡ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾಳೆ ನಿರ್ಣಾಯಕ ತೀರ್ಮಾನ: ಬುಧವಾರ ಬೆಳಿಗ್ಗೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ನಿರ್ಣಾಯಕ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.
ಬಿಜೆಪಿಯ ಎಲ್ಲಾ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾಮೂಹಿಕವಾಗಿ ರಾಜಿನಾಮೆ ಘೋಷಿಸುವುದು ಸೇರಿದಂತೆ ಕಠಿಣ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಬಿಜೆಪಿ ನೀಡಿದೆ. ಅಲ್ಲದೆ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿದೆ.
ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ , ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವಂತೆ ಮಂಡಲ ಸಮಿತಿ ಸೂಚನೆ ನೀಡಿದೆ.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…