ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ವಿರಾಜಪೇಟೆ ತಹಶೀಲ್ದಾರ್ ಆಗಿ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ. ವರ್ಗಾವಣೆ ಆಗಿದೆ ಎಂಬ ಮಾಹಿತಿ ಇದೆ.
ಅಧಿಕೃತ ಆದೇಶ ಇನ್ನೂ ಕೈ ಸೇರಿಲ್ಲ ಎಂದು ಕುಂಞಿ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಸುಳ್ಯ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಕುಂಞಿ ಅಹಮ್ಮದ್ ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಕಳೆದ ಜುಲೈ ತಿಂಗಳಲ್ಲಿ ಇವರಿಗೆ ಒಮ್ಮೆ ವರ್ಗಾವಣೆ ಆದೇಶ ಬಂದಿತ್ತು. ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಸರಕಾರ ಬದಲಾದ ಕಾರಣ ಇವರ ವರ್ಗಾವಣೆ ಆದೇಶಕ್ಕೆ ತಡೆ ಬಿದ್ದಿತ್ತು. ಇದೀಗ ಮತ್ತೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಬಂದಿದೆ. ಅಧಿಕಾರ ವಹಿಸಿ ಒಂದು ವರ್ಷ ಆಗುವ ಮುನ್ನವೇ ಎರಡನೇ ಬಾರಿಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…