ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…