ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

August 22, 2019
9:29 PM

ಸುಳ್ಯ:ಪ್ರೌಢಶಾಲಾ ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ನರೇಗಾ ಅಡಿಯಲ್ಲಿ ಐವತ್ತು ಸಾವಿರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಬಡ್ಡಿ ಕ್ರೀಡಾಂಗಣವನ್ನು ತಾಲೂಕು ಪಂಚಾಯತ್ ಸದಸ್ಯೆ ಯಶೋಧಾ ಬಾಳೆಗುಡ್ಡೆ ಉದ್ಘಾಟಿಸಿದರು.
ಕ್ಷೇತ್ರ ಶಿಕ್ಷ ಣಾಧಿಕಾರಿ ಎಸ್.ಪಿ. ಮಹಾದೇವ, ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ ,ದೇವಚಳ್ಳ ಗ್ರಾಪಂ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಕೃಷ್ಣಯ್ಯ ಮೂಲೆ ತೋಟ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ವೀಣಾ ಎಂ.ಟಿ, ದೇವಚಳ್ಳ ಗ್ರಾ.ಪಂ.ಪಿಡಿಒ ಕಾವ್ಯ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗಣೇಶ್. ಪಿ , ಸಹದೇವ, ಸೂಫಿ ಪೆರಾಜೆ ಮುಖ್ಯ ಅತಿಥಿಗಳಾಗಿದ್ದರು. ಎಲಿಮಲೆ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲು ಸ್ವಾಗತಿಸಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತಿರುಮಲೇಶ್ವರಿ. ಯು.ಎಸ್. ವಂದಿಸಿದರು. ಶಿಕ್ಷಕ ಗೋಪಿನಾಥ ಎಂ ಕಾರ್ಯಕ್ರಮ ನಿರೂಪಿಸಿದರು.

Advertisement

ಎಣ್ಮೂರು ಪ್ರೌಢಶಾಲೆ, ಜ್ನಾನದೀಪ ಎಲಿಮಲೆ ವಿಜೇತರು: ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಎಣ್ಮೂರು ಹಾಗೂ ದ್ವಿತೀಯ ಸ್ಥಾನವನ್ನು ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಹಾಗೂ ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಎಣ್ಮೂರು ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು .

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ
July 14, 2025
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group